ಅಕ್ಟೋಬರ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ: ಐಎಂಡಿ ಮುನ್ಸೂಚನೆ

ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD)
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಶನಿವಾರ ತಿಳಿಸಿದೆ.

ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ ನಿಂದ ಡಿಸೆಂಬರ್ ಅವಧಿಯಲ್ಲಿ ಮಳೆ ತರುವ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿರುತ್ತದೆ ಎಂದು ಐಎಂಡಿ ಹೇಳಿದೆ.

ಇದರರ್ಥ, ಈ ಪ್ರದೇಶವು ದೀರ್ಘಾವಧಿಯ ಸರಾಸರಿ 334.13 ಮಿಮೀ ಮಳೆಯ ಶೇಕಡಾ 88 ರಿಂದ ಶೇಕಡಾ 112 ರಷ್ಟು ಮಳೆ ಪಡೆಯಬಹುದು ಎಂದು ಐಎಂಡಿ ತಿಳಿಸಿದೆ.

ಅಕ್ಟೋಬರ್‌ನಲ್ಲಿ ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಸಹ ಹವಾಮಾನ ಇಲಾಖೆ ಕಚೇರಿ ಎಚ್ಚರಿಕೆ ನೀಡಿದೆ.

ಈಶಾನ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಹೆಚ್ಚು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com