ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾಗೆ 14 ದಿನಗಳ ನ್ಯಾಯಾಂಗ ಬಂಧನ!
2015ರ ಡ್ರಗ್ಸ್ ಪ್ರಕರಣದಲ್ಲಿ ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
Published: 30th September 2023 08:58 PM | Last Updated: 30th September 2023 08:58 PM | A+A A-

ಸುಖಪಾಲ್ ಖೈರಾ
2015ರ ಡ್ರಗ್ಸ್ ಪ್ರಕರಣದಲ್ಲಿ ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಎರಡು ದಿನಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯ ನಡುವೆ ಖೈರಾ ಅವರನ್ನು ಜಲಾಲಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಸಕ ಖೈರಾ ಅವರನ್ನು ಚಂಡೀಗಢದ ನಿವಾಸದಲ್ಲಿ ಗುರುವಾರ ಬಂಧಿಸಲಾಗಿತ್ತು. 2015ರ ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಉಪ ಮಹಾನಿರೀಕ್ಷಕ ಸ್ವಪನ್ ಶರ್ಮಾ ನೇತೃತ್ವದ ವಿಶೇಷ ತನಿಖಾ ತಂಡ ನಡೆಸಿದ ತನಿಖೆಯ ನಂತರ ಪಂಜಾಬ್ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಈ ಪ್ರಕರಣವು ಮಾರ್ಚ್ 2015ರಲ್ಲಿ ಜಲಾಲಾಬಾದ್, ಫಜಿಲ್ಕಾದಲ್ಲಿ ದಾಖಲಾಗಿತ್ತು. ಖೈರಾಗೆ ನಿಕಟವಾಗಿರುವ ಗುರ್ದೇವ್ ಸಿಂಗ್ ಸೇರಿದಂತೆ ಒಂಬತ್ತು ಜನರ ಮೇಲೆ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿ ನಂತರ ಶಿಕ್ಷೆ ವಿಧಿಸಲಾಯಿತು.
ಇದನ್ನೂ ಓದಿ: ಡ್ರಗ್ಸ್ ಪ್ರಕರಣ; ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಬಂಧನ
ಇವರಿಂದ 2 ಕೆಜಿ ಹೆರಾಯಿನ್, 24 ಚಿನ್ನದ ಬಿಸ್ಕತ್‌ಗಳು, ಒಂದು ಕಂಟ್ರಿ ಮೇಡ್ ಪಿಸ್ತೂಲ್, .315 ಬೋರ್ ಪಿಸ್ತೂಲ್ ಮತ್ತು ಎರಡು ಪಾಕಿಸ್ತಾನಿ ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತರ, ಪೊಲೀಸ್ ತನಿಖೆಯಲ್ಲಿ ಖೈರಾ ಹೆಸರು ಬಹಿರಂಗವಾಯಿತು.
ಆದಾಗ್ಯೂ, 2017ರಲ್ಲಿ, ಹೆಚ್ಚುವರಿ ಆರೋಪಿಯಾಗಿ ಸಮನ್ಸ್ ಪಡೆದ ಖೈರಾ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ತಡೆಹಿಡಿಯಿತು. 2015ರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಮನಿ ಲಾಂಡರಿಂಗ್ ಆರೋಪದ ಮೇಲೆ 2021ರಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು. ನಂತರ 2022ರಲ್ಲಿ ಜಾಮೀನು ಪಡೆದರು. ಫೆಬ್ರವರಿ 2023ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಖೈರಾ ವಿರುದ್ಧದ ಸಮನ್ಸ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು.