ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್ ಕೌಂಟರ್; ಎಂಟು ಮಂದಿ ನಕ್ಸಲೀಯರ ಹತ್ಯೆ!

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಎಂಟು ಮಂದಿ ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಎಂಟು ಮಂದಿ ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.

ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಕೋಬ್ರಾಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ನಾಲ್ವರು ನಕ್ಸಲೀಯರ ಮೃತದೇಹಗಳು ಮತ್ತು ಲಘು ಮೆಷಿನ್ ಗನ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು. ತದನಂತರ ಮುಂದುವರೆದ ಶೋಧ ಕಾರ್ಯಾಚರಣೆಯಲ್ಲಿ ಮತ್ತೆ ನಾಲ್ವರ ಮೃತದೇಹ ದೊರೆಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು-ನಕ್ಸಲೀಯರ ಮಧ್ಯೆ ಎನ್ ಕೌಂಟರ್: ಸಿಆರ್ ಪಿಎಫ್ ಯೋಧ ಹುತಾತ್ಮ

ಬಿಜಾಪುರ ರಾಜ್ಯ ರಾಜಧಾನಿ ರಾಯ್‌ಪುರದಿಂದ 400 ಕಿ.ಮೀ ದೂರದಲ್ಲಿದೆ. ಈ ಘಟನೆಯೊಂದಿಗೆ, ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 37 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ, ಇದು ಏಪ್ರಿಲ್ 19 ರಂದು ಮೊದಲ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com