ತಿಹಾರ್‌ ಜೈಲಿನಲ್ಲಿ ರಾತ್ರಿ ಕಳೆದ ಅರವಿಂದ ಕೇಜ್ರಿವಾಲ್, ವೈದ್ಯಕೀಯ ಪರೀಕ್ಷೆಯಲ್ಲಿ ಕಡಿಮೆ ಸಕ್ಕರೆ ಮಟ್ಟ ಪತ್ತೆ!

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಮೊದಲ ರಾತ್ರಿ ಕಳೆದಿದ್ದಾರೆ. 14X8 ಅಡಿ ಸೆಲ್‌ನಲ್ಲಿದ್ದ ಅವರು, ತಮ್ಮ ಸೆಲ್‌ನಲ್ಲೇ ನಡೆದಾಡುತ್ತಿದ್ದರು ಮತ್ತು ಸ್ವಲ್ಪ ಸಮಯ ಮಾತ್ರ ನಿದ್ರಿಸಿದರು ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಮೊದಲ ರಾತ್ರಿ ಕಳೆದಿದ್ದಾರೆ. 14X8 ಅಡಿ ಸೆಲ್‌ನಲ್ಲಿದ್ದ ಅವರು, ತಮ್ಮ ಸೆಲ್‌ನಲ್ಲೇ ನಡೆದಾಡುತ್ತಿದ್ದರು ಮತ್ತು ಸ್ವಲ್ಪ ಸಮಯ ಮಾತ್ರ ನಿದ್ರಿಸಿದರು ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೈಲು ಅಧಿಕಾರಿಗಳ ಪ್ರಕಾರ, ಸೋಮವಾರ ಸಂಜೆ 4 ಗಂಟೆಗೆ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಕರೆತರಲಾಯಿತು ಮತ್ತು ಸೆಲ್‌ಗೆ ಕಳುಹಿಸುವ ಮೊದಲು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈವೇಳೆ ಅವರ ಶುಗರ್ ಲೆವೆಲ್ 50ಕ್ಕಿಂತ ಕಡಿಮೆ ಇದ್ದು, ವೈದ್ಯರ ಸಲಹೆ ಮೇರೆಗೆ ಔಷಧ ನೀಡಲಾಗಿದೆ ಎಂದರು.

ಏಷ್ಯಾದ ಅತಿದೊಡ್ಡ ಜೈಲಿನಲ್ಲಿ ಇರಿಸಲಾಗಿರುವ ಭಾರತದ ಮೊದಲ ಹಾಲಿ ಮುಖ್ಯಮಂತ್ರಿಯನ್ನು ಜೈಲು ಸಂಖ್ಯೆ ಎರಡರಲ್ಲಿ ಇರಿಸಲಾಗಿದೆ. ಅವರ ಪತ್ನಿ ಮತ್ತು ಮಕ್ಕಳು ಮಂಗಳವಾರ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಮಧ್ಯಾಹ್ನ ಚಹಾ ನೀಡಲಾಯಿತು ಮತ್ತು ರಾತ್ರಿಯ ಊಟಕ್ಕೆ ಮನೆಯಲ್ಲಿ ತಯಾರಿಸಿದ ಆಹಾರ ನೀಡಲಾಯಿತು. ಅವರಿಗೆ ಹಾಸಿಗೆ, ಹೊದಿಕೆ ಮತ್ತು ಎರಡು ದಿಂಬುಗಳನ್ನು ನೀಡಲಾಗಿದೆ ಎಂದು ಮೂಲವೊಂದು ಮಂಗಳವಾರ ತಿಳಿಸಿದೆ.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ED ವಿಚಾರಣೆ ವೇಳೆ ಅತಿಶಿ, ಸೌರಭ್ ಭಾರದ್ವಾಜ್ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್!

ಅವರು ಸ್ವಲ್ಪ ಸಮಯ ನೆಲದಲ್ಲಿಯೇ ಮಲಗಿದ್ದರು ಮತ್ತು ತಡರಾತ್ರಿಯಲ್ಲಿ ಸೆಲ್‌ನಲ್ಲಿ ನಡೆದಾಡುತ್ತಿರುವುದು ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟ ಇನ್ನೂ ಕಡಿಮೆಯಿತ್ತು ಮತ್ತು ಅವರು ತಿಹಾರ್ ಜೈಲು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯಲ್ಲಿ ತಯಾರಿಸಿದ ಆಹಾರ ಸೇವಿಸಲು ಅವರಿಗೆ ಅನುಮತಿ ನೀಡಲಾಗಿದೆ ಮತ್ತು ಅವರ ಸಕ್ಕರೆ ಮಟ್ಟವು ಸಾಮಾನ್ಯ ಸ್ಥಿತಿಗೆ ಬರುವವರೆಗೆ ಅದನ್ನು ಪ್ರತಿದಿನ ನೀಡಲಾಗುತ್ತದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಗೆ 15 ದಿನ ನ್ಯಾಯಾಂಗ ಬಂಧನ

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ಬೆಳಿಗ್ಗೆ ತಮ್ಮ ಸೆಲ್‌ನಲ್ಲಿ ಧ್ಯಾನ ಮಾಡಿದ ನಂತರ ಅವರಿಗೆ ಚಹಾ ಮತ್ತು ಎರಡು ಬಿಸ್ಕತ್ತುಗಳನ್ನು ನೀಡಲಾಯಿತು ಎಂದು ಮೂಲಗಳು ತಿಳಿಸಿವೆ.

ತಿಹಾರ್ ಜೈಲಿನ ಭದ್ರತೆಯ ಇಬ್ಬರು ಸಿಬ್ಬಂದಿ ಮತ್ತು ಜೈಲು ವಾರ್ಡನ್ ಅನ್ನು ಅವರ ಸೆಲ್ ಹೊರಗೆ ನಿಯೋಜಿಸಲಾಗಿದೆ. ಜೈಲಿನ ಅಧಿಕಾರಿಗಳು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಅವರ ಮೇಲೆ ನಿಗಾ ಇಡುತ್ತಿದ್ದು, ಅವರ ಸೆಲ್ ಬಳಿ ಕ್ವಿಕ್ ರಿಯಾಕ್ಷನ್ ತಂಡವನ್ನೂ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಜ್ರಿವಾಲ್ ಅವರು ಕೇಳಿದ್ದ ರಾಮಾಯಣ, ಮಹಾಭಾರತ ಮತ್ತು 'ಪ್ರಧಾನಿಗಳು ಹೇಗೆ ನಿರ್ಧರಿಸುತ್ತಾರೆ' (How Prime Ministers Decide) ಎನ್ನುವ ಪುಸ್ತಕಗಳನ್ನು ಅವರಿಗೆ ಒದಗಿಸಲಾಗಿದೆ. ಅವರು ಧರಿಸಿರುವ ಧಾರ್ಮಿಕ ಲಾಕೆಟ್‌ಗೆ ಸಹ ಅನುಮತಿ ನೀಡಲಾಗಿದೆ.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ಬಿಜೆಪಿ ಸೇರದಿದ್ದರೆ ED ತನ್ನನ್ನು ಸೇರಿ ಇತರ 3 AAP ನಾಯಕರನ್ನು ಬಂಧಿಸಲಿದೆ: ದೆಹಲಿ ಸಚಿವೆ ಅತಿಶಿ

ನಿಯಮಗಳ ಪ್ರಕಾರ, ಕೇಜ್ರಿವಾಲ್ ಅವರು ಭೇಟಿಯಾಗಲು ಬಯಸುವ ಆರು ಜನರ ಪಟ್ಟಿಯನ್ನು ನೀಡಿದ್ದಾರೆ. ಆ ಪಟ್ಟಿಯಲ್ಲಿ ಅವರ ಪತ್ನಿ ಸುನೀತಾ ಕೇಜ್ರಿವಾಲ್, ಅವರ ಮಗ ಮತ್ತು ಮಗಳು, ಅವರ ಖಾಸಗಿ ಕಾರ್ಯದರ್ಶಿ ಬಿಭವ್ ಕುಮಾರ್ ಮತ್ತು ಎಎಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್ ಇದ್ದಾರೆ.

ಕೇಜ್ರಿವಾಲ್ ಅವರ ಬಿಡುಗಡೆಯು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಅಡ್ಡಿಯಾಗಬಹುದು ಎಂಬ ಜಾರಿ ನಿರ್ದೇಶನಾಲಯದ ವಾದವನ್ನು ಗಮನಿಸಿ ದೆಹಲಿ ನ್ಯಾಯಾಲಯವು ಸೋಮವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com