ಲೋಕಸಭಾ ಚುನಾವಣೆ: ಆಯೋಗದಿಂದ ರಾಜ್ಯಗಳಿಗೆ ವಿಶೇಷ ವೀಕ್ಷಕರ ನೇಮಕ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಆಡಳಿತಾತ್ಮಕ, ಭದ್ರತೆ ಮತ್ತು ವೆಚ್ಚದ ಮೇಲ್ವಿಚಾರಣೆ ಉದ್ದೇಶಗಳಿಗಾಗಿ ವಿಶೇಷ ವೀಕ್ಷಕರನ್ನು ಚುನಾವಣಾ ಆಯೋಗ ಮಂಗಳವಾರ ನೇಮಿಸಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಆಡಳಿತಾತ್ಮಕ, ಭದ್ರತೆ ಮತ್ತು ವೆಚ್ಚದ ಮೇಲ್ವಿಚಾರಣೆ ಉದ್ದೇಶಗಳಿಗಾಗಿ ವಿಶೇಷ ವೀಕ್ಷಕರನ್ನು ಚುನಾವಣಾ ಆಯೋಗ ಮಂಗಳವಾರ ನೇಮಿಸಿದೆ.

ಹಣ, ತೋಳ್ಬಲ, ಸುಳ್ಳು ಮಾಹಿತಿ ವಿರುದ್ಧವಾಗಿ ಚುನಾವಣಾ ಪ್ರಕ್ರಿಯೆಯನ್ನು ಕಟ್ಟುನಿಟ್ಟಾದ ಜಾಗರೂಕತೆಯಿಂದ ಮೇಲ್ವಿಚಾರಣೆ ಮಾಡುವ ಕಾರ್ಯಕ್ಕಾಗಿ ಮಾಜಿ ನಾಗರಿಕ ಸೇವಾ ಅಧಿಕಾರಿಗಳನ್ನು ವಿಶೇಷ ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ಚುನಾವಣಾ ಸಮಿತಿ ಹೇಳಿದೆ.

ಚುನಾವಣಾ ಆಯೋಗ
Loksabha Election 2024: ಶೇ.100ರಷ್ಟು ವಿವಿಪ್ಯಾಟ್ ಎಣಿಕೆ; ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ನೋಟಿಸ್

ಏಳು ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಲೋಕಸಭೆ ಜೊತೆಗೆ ವಿಧಾನಸಭಾ ಚುನಾವಣೆ ನಡೆಯಲಿರುವ ಓಡಿಶಾ ಮತ್ತು ಆಂಧ್ರ ಪ್ರದೇಶದಲ್ಲಿ ವಿಶೇಷ ವೀಕ್ಷಕರನ್ನು (ಜನರಲ್ ಮತ್ತು ಪೊಲೀಸ್) ನಿಯೋಜಿಸಲಾಗಿದೆ.

ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲೂ ವಿಶೇಷ ವೆಚ್ಚ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com