ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ILBS ಆಸ್ಪತ್ರೆಯಿಂದ ಬಿಡುಗಡೆ

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಬುಧವಾರ ಐಎಲ್‌ಬಿಎಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಜಾಮೀನು ಆದೇಶದ ಪ್ರಕ್ರಿಯೆ ಪೂರ್ಣಗೊಂಡ ನಂತರ ಸಂಜಯ್ ಸಿಂಗ್ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸಂಜಯ್ ಸಿಂಗ್
ಸಂಜಯ್ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಬುಧವಾರ ಐಎಲ್‌ಬಿಎಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಹೇಳಿದ ನಂತರ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿಬಿ ವರಾಳೆ ಅವರಿದ್ದ ಪೀಠವು, ಆರು ತಿಂಗಳಿನಿಂದ ಜೈಲಿನಲ್ಲಿರುವ ಸಿಂಗ್ ಅವರಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನದ ನೀಡಿತು.

ಸಂಜಯ್ ಸಿಂಗ್
ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಗೆ ಸುಪ್ರೀಂ ಕೋರ್ಟ್ ಜಾಮೀನು

ಯಕೃತ್ ಸಂಬಂಧಿ ಸಮಸ್ಯೆಗಾಗಿ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿದ್ದರು ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಮೀನು ಆದೇಶದ ಪ್ರಕ್ರಿಯೆ ಪೂರ್ಣಗೊಂಡ ನಂತರ ಸಂಜಯ್ ಸಿಂಗ್ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

'ಸಿಂಗ್ ಅವರು ನಿಯಮಿತ ತಪಾಸಣೆಗಾಗಿ ಐಎಲ್‌ಬಿಎಸ್‌ಗೆ ಹೋಗಿದ್ದರು. ಆದರೆ, ಅವರು ದಾಖಲಾಗಿದ್ದರು. ಅವರು ಆಸ್ಪತ್ರೆಯಲ್ಲಿದ್ದಾಗ ಅವರಿಗೆ ಜಾಮೀನು ಸಿಕ್ಕಿರುವ ಸುದ್ದಿ ತಿಳಿಯಿತು' ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com