ತೆಲಂಗಾಣ: ಫಾರ್ಮ ಘಟಕದಲ್ಲಿ ಸ್ಫೋಟ 7 ಸಾವು, 10 ಕ್ಕೂ ಹೆಚ್ಚು ಮಂದಿಗೆ ಗಾಯ!

ತೆಲಂಗಾಣದಲ್ಲಿ ಫಾರ್ಮಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದರೆ, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Blast site near Pharma plant in Telangana.
ಫಾರ್ಮ ಘಟಕದಲ್ಲಿ ಸ್ಫೋಟ TNIE
Updated on: 

ಹೈದರಾಬಾದ್: ತೆಲಂಗಾಣದಲ್ಲಿ ಫಾರ್ಮಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದರೆ, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸಂಗಾರೆಡ್ದಿ ಜಿಲ್ಲೆಯ ಚಂದ್ಲಾಪುರ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಸ್ಥಳದಲ್ಲೇ ಸಾವನ್ನಪ್ಪಿದವರಲ್ಲಿ ಒಬ್ಬನನ್ನು ಘಟಕದ ಮ್ಯಾನೇಜರ್ ರವಿ ಶರ್ಮಾ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ರಾಸಾಯನಿಕ ಕಾರ್ಖಾನೆಯ ರಿಯಾಕ್ಟರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಕೈಗಾರಿಕೆಗೆ ಹೊಂದಿಕೊಂಡಂತಿರುವ ಕೆಲವು ಕಟ್ಟಡಗಳಿಗೂ ಹಾನಿಯಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟವು ಬೆಂಕಿ ಹೊತ್ತುಕೊಳ್ಳುವಂತೆ ಮಾಡಿದೆ.

Blast site near Pharma plant in Telangana.
ಬೆಂಗಳೂರು ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಅಬ್ದುಲ್ ಮತೀನ್ ತಾಹಾಗಾಗಿ NIA ತೀವ್ರ ಶೋಧ!

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. "ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡಿದ್ದು ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ, ಕನಿಷ್ಠ 10-15 ಜನರಿಗೆ ಗಾಯಗಳಾಗಿವೆ, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com