ಕಾಂಗ್ರೆಸ್ ತೊರೆದ ಗೌರವ್ ವಲ್ಲಭ್, ಬಿಜೆಪಿ ಸೇರ್ಪಡೆ ಸಾಧ್ಯತೆ

ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಗುರುವಾರ ಪಕ್ಷದ ಎಲ್ಲಾ ಹುದ್ದೆಗಳಿಗೆ ಮತ್ತು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಸನಾತನ ಸಂಸ್ಥೆಯ ವಿರುದ್ಧ ಘೋಷಣೆ ಕೂಗಲು ಅಥವಾ 'ಸಂಪತ್ತಿನ ಸೃಷ್ಟಿಕರ್ತರನ್ನು' ನಿಂದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಗೌರವ್ ವಲ್ಲಭ್
ಕಾಂಗ್ರೆಸ್ ನಾಯಕ ಗೌರವ್ ವಲ್ಲಭ್

ನವದೆಹಲಿ: ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಗುರುವಾರ ಪಕ್ಷದ ಎಲ್ಲಾ ಹುದ್ದೆಗಳಿಗೆ ಮತ್ತು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಸನಾತನ ಸಂಸ್ಥೆಯ ವಿರುದ್ಧ ಘೋಷಣೆ ಕೂಗಲು ಅಥವಾ 'ಸಂಪತ್ತಿನ ಸೃಷ್ಟಿಕರ್ತರನ್ನು' ನಿಂದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಲ್ಲಭ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಕ್ಷವು ಮುನ್ನಡೆಯುತ್ತಿರುವ ದಿಕ್ಕಿನಲ್ಲಿ ನನಗೆ ನೆಮ್ಮದಿಯಿಲ್ಲ. ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಅಥವಾ ಸಂಪತ್ತು ಸೃಷ್ಟಿಕರ್ತರನ್ನು ನಿಂದಿಸಲು ಸಾಧ್ಯವಿಲ್ಲ. ಹೀಗಾಗಿ ಪಕ್ಷದ ಎಲ್ಲಾ ಹುದ್ದೆಗಳಿಗೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ವಲ್ಲಬ್ ಹಲವಾರು ತಿಂಗಳುಗಳಿಂದ ಪಕ್ಷದ ಪರವಾಗಿ ಟಿವಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರಲಿಲ್ಲ ಮತ್ತು ದೀರ್ಘಕಾಲ ಯಾವುದೇ ಸುದ್ದಿಗೋಷ್ಠಿ ನಡೆಸಿರಲಿಲ್ಲ. ಕಾಂಗ್ರೆಸ್‌ಗೆ ಸೇರಿದಾಗ, ನಾನು ಅದನ್ನು ನಂಬಿದ್ದೆ. ಯುವಕರು ಮತ್ತು ಬುದ್ಧಿಜೀವಿಗಳು ಮತ್ತು ಅವರ ಆಲೋಚನೆಗಳನ್ನು ಗೌರವಿಸುವ ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್. ಆದರೆ ಹೊಸ ಆಲೋಚನೆಗಳನ್ನು ಹೊಂದಿರುವ ಯುವಕರ ಜತೆ ಪಕ್ಷ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೆಲಕಾಲ ಅನಿಸಿತು’ ಎಂದು ಅವರು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ. ಗೌರವ್ ವಲ್ಲಬ್ ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com