ಸೋನಿಯಾ ಗಾಂಧಿ, ಅಶ್ವಿನಿ ವೈಷ್ಣವ್ ಸೇರಿ 14 ಮಂದಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ 14 ಮಂದಿ ಗುರುವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಸೋನಿಯಾ ಗಾಂಧಿ - ಅಶ್ವಿನಿ ವೈಷ್ಣವ್
ಸೋನಿಯಾ ಗಾಂಧಿ - ಅಶ್ವಿನಿ ವೈಷ್ಣವ್
Updated on

ನವದೆಹಲಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ 14 ಮಂದಿ ಗುರುವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ವೈಷ್ಣವ್ ಒಡಿಶಾದಿಂದ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕದಿಂದ ಕಾಂಗ್ರೆಸ್ ನಾಯಕ ಅಜಯ್ ಮಾಕನ್, ಉತ್ತರ ಪ್ರದೇಶದಿಂದ ಬಿಜೆಪಿ ನಾಯಕ ಆರ್‌ಪಿಎನ್ ಸಿಂಗ್ ಮತ್ತು ಪಶ್ಚಿಮ ಬಂಗಾಳದಿಂದ ಬಿಜೆಪಿ ಸದಸ್ಯ ಸಮಿಕ್ ಭಟ್ಟಾಚಾರ್ಯ ಸೇರಿದಂತೆ 14 ಮಂದಿ ಪ್ರಮಾಣ ವಚನ ಸ್ವೀಕರಿಸಿದರು.

ಸೋನಿಯಾ ಗಾಂಧಿ - ಅಶ್ವಿನಿ ವೈಷ್ಣವ್
ರಾಜ್ಯಸಭೆ ಸದಸ್ಯೆಯಾಗಿ ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ

ಆಂಧ್ರಪ್ರದೇಶದಿಂದ ವೈಎಸ್‌ಆರ್‌ಸಿಪಿ ನಾಯಕರಾದ ಗೋಲಾ ಬಾಬು ರಾವ್, ಮೇಧಾ ರಘುನಾಥ್ ರೆಡ್ಡಿ ಮತ್ತು ಯೆರುಂ ವೆಂಕಟ್ ಸುಬ್ಬಾ ರೆಡ್ಡಿ ಅವರು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಅವರೆಲ್ಲರೂ ರಾಜ್ಯಸಭೆಯ ಅಧ್ಯಕ್ಷರೊಂದಿಗೆ ಗುಂಪು ಛಾಯಾಚಿತ್ರ ತೆಗೆಸಿಕೊಂಡರು.

ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ರಾಜ್ಯಸಭೆ ಸದಸ್ಯೆಯಾಗಿದ್ದಾರೆ. ಅವರು ರಾಜ್ಯಸಭಾ ನಾಯಕ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ಮತ್ತು ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com