ಬಿಹಾರ ಸಚಿವ, ಜೆಡಿಯು ಹಿರಿಯ ನಾಯಕ ಮಹೇಶ್ವರ್ ಹಜಾರಿ ಪುತ್ರ ಕಾಂಗ್ರೆಸ್ ಸೇರ್ಪಡೆ

ಬಿಹಾರ ಸಚಿವ ಹಾಗೂ ಜೆಡಿಯು ಹಿರಿಯ ನಾಯಕ ಮಹೇಶ್ವರ್ ಹಜಾರಿ ಅವರ ಪುತ್ರ ಸನ್ನಿ ಹಜಾರಿ ಅವರು ಶುಕ್ರವಾರ ಪಾಟ್ನಾದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ: ಬಿಹಾರ ಸಚಿವ ಹಾಗೂ ಜೆಡಿಯು ಹಿರಿಯ ನಾಯಕ ಮಹೇಶ್ವರ್ ಹಜಾರಿ ಅವರ ಪುತ್ರ ಸನ್ನಿ ಹಜಾರಿ ಅವರು ಶುಕ್ರವಾರ ಪಾಟ್ನಾದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅವರನ್ನು ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಇತ್ತೀಚಿಗೆ ಬಿಹಾರ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಹೇಶ್ವರ್ ಹಜಾರಿ ಅವರು ಈಗ ನಿತೀಶ್ ಕುಮಾರ್ ಸಂಪುಟದಲ್ಲಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವರಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಅವರು ಸನ್ನಿ ಹಜಾರಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಎನ್‌ಡಿಎ ಮಿತ್ರ ಪಕ್ಷ ಚಿರಾಗ್ ಪಾಸ್ವಾನ್‌ ಅವರ ಲೋಕ ಜನಶಕ್ತಿ ಪಕ್ಷದಿಂದ(ರಾಮ್ ವಿಲಾಸ್) ಶಾಂಭವಿ ಚೌಧರಿ ಅವರನ್ನು ಕಣಕ್ಕಿಳಿಸಿದ ಸಮಸ್ತಿಪುರದ ಮೀಸಲು ಕ್ಷೇತ್ರದಲ್ಲಿ "ಮಾಸ್ಟರ್‌ಸ್ಟ್ರೋಕ್" ನೀಡಲು ಸನ್ನಿ ಅವರನ್ನು ಕಾಂಗ್ರೆಸ್ ಗೆ ಸೆಳೆಯಲಾಗಿದೆ ಎನ್ನಲಾಗುತ್ತಿದೆ.

ಸಾಂದರ್ಭಿಕ ಚಿತ್ರ
ಬಿಹಾರ: ಬಿಜೆಪಿ ತೊರೆದು ಸಂಸದ ಅಜಯ್ ನಿಶಾದ್ ಕಾಂಗ್ರೆಸ್‌ ಸೇರ್ಪಡೆ!

ಸಮಸ್ತಿಪುರದಿಂದ ಸನ್ನಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್, "ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಿರ್ಧರಿಸುವುದಿಲ್ಲ. ಸ್ಕ್ರೀನಿಂಗ್ ಸಮಿತಿಯು ಆಕಾಂಕ್ಷಿ ಅಭ್ಯರ್ಥಿಗಳ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡುತ್ತದೆ ಮತ್ತು ಕೇಂದ್ರ ಚುನಾವಣಾ ಸಮಿತಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ" ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com