ಮುಂಬೈ: ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಶಾಲೆಯ ಪ್ಯೂನ್ ಬಂಧನ

ವಾಣಿಜ್ಯ ನಗರಿ ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ ಪ್ಯೂನ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮುಂಬೈ: ವಾಣಿಜ್ಯ ನಗರಿ ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ ಪ್ಯೂನ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಪ್ಯೂನ್ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನೆಂದು ಹೇಳಲಾಗಿದೆ. ಆದರೆ ಕಳೆದ ವಾರ ಆಕೆ ತನ್ನ ಪೋಷಕರಿಗೆ ತಿಳಿಸಿದಾಗ ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ಶುಕ್ರವಾರ ಮಗುವಿನ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ಯೂನ್ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕಾಗಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಮೊಮ್ಮಗಳ ಮೇಲೆ ಅಜ್ಜನಿಂದ ಅತ್ಯಾಚಾರ; ಅಪ್ರಾಪ್ತ ಬಾಲಕಿ ಗರ್ಭಿಣಿ!

ಪ್ಯೂನ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 5 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com