ಪಶ್ಚಿಮ ಬಂಗಾಳದಲ್ಲಿ ಎನ್ಐಎ ವಾಹನದ ಮೇಲೆ ದಾಳಿ!

ಎನ್ಐಎ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆದಿದೆ.
NIA
ಎನ್ಐಎ online desk
Updated on

ಕೋಲ್ಕತ್ತ: ಎನ್ಐಎ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆದಿದೆ.

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ಭೂಪತಿನಗರ ಪ್ರದೇಶದಲ್ಲಿ 2022 ರ ಬಾಂಬ್ ಸ್ಫೋಟ ಪ್ರಕರಣದ ತನಿಖೆಗೆ ಎನ್ಐಎ ಅಧಿಕಾರಿಗಳು ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಕೋಲ್ಕತ್ತಾಗೆ ಹಿಂದಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳ ಹೇಳಿಕೆಯಿಂದ ತಿಳಿದುಬಂದಿದೆ.

"ಸ್ಥಳೀಯರು ವಾಹನವನ್ನು ಘೇರಾವ್ ಮಾಡಿದರು ಮತ್ತು ಅದರ ಮೇಲೆ ಕಲ್ಲು ತೂರಿದರು. ಘಟನೆಯಲ್ಲಿ ಎನ್‌ಐಎ ತನ್ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿದೆ. ಈ ಸಂಬಂಧ ಎನ್‌ಐಎ ಪೊಲೀಸ್‌ ದೂರು ಕೂಡ ದಾಖಲಿಸಿದೆ.

NIA
ರಾಮೇಶ್ವರಂ ಕೆಫೆ ಸ್ಫೋಟ: ಸಾಕ್ಷಿಗಳ ಗುರುತು ಬಹಿರಂಗಪಡಿಸದಂತೆ NIA ಎಚ್ಚರಿಕೆ!

ಘಟನೆಯ ಕುರಿತು ಪ್ರತಿಕ್ರಿಯೆಗಳಿಗೆ ಕೇಂದ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಲಭ್ಯವಿರಲಿಲ್ಲ. ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಇಬ್ಬರು ಬಂಧಿತ ವ್ಯಕ್ತಿಗಳೊಂದಿಗೆ ಎನ್‌ಐಎ ತಂಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

NIA
Rameshwaram Cafe Blast: NIA ಯಿಂದ BJP ಕಾರ್ಯಕರ್ತನ ವಿಚಾರಣೆ

ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಈ ಘಟನೆಯು ಜನವರಿ 5 ರಂದು ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ದಾಳಿಯ ಸಂದರ್ಭದಲ್ಲಿ ಉತ್ತರ 24 ಪರಗಣಗಳ ಸಂದೇಶಖಾಲಿ ಪ್ರದೇಶದಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದನ್ನು ನೆನಪು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com