ಕಾಶ್ಮೀರದ ಬಗ್ಗೆ ಖರ್ಗೆ ಹೇಳಿಕೆ ನಾಚಿಕೆಗೇಡು; ಇದು ಕಾಂಗ್ರೆಸ್‌ನ 'ತುಕ್ಡೆ-ತುಕ್ಡೆ' ಮನಸ್ಥಿತಿ: ಪ್ರಧಾನಿ ಮೋದಿ ವಾಗ್ದಾಳಿ

ರಾಜಸ್ಥಾನದಲ್ಲಿ ನಡೆದ ರ್ಯಾಲಿ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜಸ್ಥಾನಕ್ಕೂ ಜಮ್ಮು ಮತ್ತು ಕಾಶ್ಮೀರಕ್ಕೂ ಏನು ಸಂಬಂಧ ಎಂದು ಹೇಳಿಕೆ ನೀಡಿದ್ದು ಇದು ರಾಜಕೀಯ ಕಿಡಿ ಹೆಚ್ಚಿದೆ. ಖರ್ಗೆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ಮೋದಿ ಇಂದು ಕಾಂಗ್ರೆಸ್ ನ 'ತುಕ್ಡೆ ತುಕ್ಡೆ' ಮನಸ್ಥಿತಿ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿTNIE

ನವದೆಹಲಿ: ರಾಜಸ್ಥಾನದಲ್ಲಿ ನಡೆದ ರ್ಯಾಲಿ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜಸ್ಥಾನಕ್ಕೂ ಜಮ್ಮು ಮತ್ತು ಕಾಶ್ಮೀರಕ್ಕೂ ಏನು ಸಂಬಂಧ ಎಂದು ಹೇಳಿಕೆ ನೀಡಿದ್ದು ಇದು ರಾಜಕೀಯ ಕಿಡಿ ಹೆಚ್ಚಿದೆ. ಖರ್ಗೆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ಮೋದಿ ಇಂದು ಕಾಂಗ್ರೆಸ್ ನ 'ತುಕ್ಡೆ ತುಕ್ಡೆ' ಮನಸ್ಥಿತಿ ಎಂದು ಕಿಡಿಕಾರಿದ್ದಾರೆ.

ಬಿಹಾರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ಖರ್ಗೆಯವರ ಈ ಹೇಳಿಕೆಯನ್ನು ಕೇಳಿ ನನಗೆ ನಾಚಿಕೆಯಾಯಿತು ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರವನ್ನು ರಕ್ಷಿಸುವ ಸಂದರ್ಭದಲ್ಲಿ ರಾಜಸ್ಥಾನ ಮತ್ತು ಬಿಹಾರದ ಯುವಕರು ತಮ್ಮ ಅತ್ಯುನ್ನತ ತ್ಯಾಗವನ್ನು ಮಾಡಿದ್ದಾರೆ. ಆದರೆ ಖರ್ಗೆ ಅವರು ರಾಜಸ್ಥಾನಕ್ಕೂ 'ಕಾಶ್ಮೀರಕ್ಕೂ ಏನು ಸಂಬಂಧ? ಎಂದು ಕೇಳುತ್ತಾರೆ. ಇದು ಆ ಪಕ್ಷದ ತುಕ್ಡೆ ತುಕ್ಡೆ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ
ಬಿಜೆಪಿ ಹೇರಿರುವ ನಿರುದ್ಯೋಗವೇ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಸಮಸ್ಯೆ: ಮಲ್ಲಿಕಾರ್ಜುನ ಖರ್ಗೆ

ರಾಜಸ್ಥಾನದಲ್ಲಿ ನಡೆದ ರ್ಯಾಲಿಯಲ್ಲಿ ಖರ್ಗೆ ಅವರು, ಪ್ರಧಾನಿ ಮೋದಿಯವರ ಭಾಷಣವನ್ನು ಉಲ್ಲೇಖಿಸಿ 370ನೇ ವಿಧಿಯನ್ನು ರದ್ದುಗೊಳಿಸಿರುವುದು ರಾಜಸ್ಥಾನದ ಸಮಸ್ಯೆಯಲ್ಲ, ಅದು ಜಮ್ಮು ಮತ್ತು ಕಾಶ್ಮೀರದ ಸಮಸ್ಯೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿರುವ ಮೋದಿ ಬಿಹಾರದ ನವಾಡದಲ್ಲಿ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕರ ಟೀಕೆಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಖರ್ಗೆ ಅವರು ಹೇಳಿದ ಮಾತುಗಳನ್ನು ಕೇಳಿ ನನಗೆ ನಾಚಿಕೆಯಾಗುತ್ತಿದೆ. ಬಿಹಾರ ಮತ್ತು ರಾಜಸ್ಥಾನದ ಯುವಕರು ಜಮ್ಮು ಮತ್ತು ಕಾಶ್ಮೀರವನ್ನು ರಕ್ಷಿಸಲು ಹೋಗಿ ಸರ್ವೋಚ್ಚ ತ್ಯಾಗ ಮಾಡಿದ್ದಾರೆ ಎಂದು ಪ್ರಧಾನಿ ಹೇಳಿದರು.

ಇದಕ್ಕೂ ಮೊದಲು, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಇತರ ಬಿಜೆಪಿ ನಾಯಕರು 'ಎಕ್ಸ್' ಕುರಿತು ಖರ್ಗೆ ಅವರ ಭಾಷಣದ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. 370ನೇ ವಿಧಿಯನ್ನು ತೆಗೆದುಹಾಕುವ ಬಗ್ಗೆ ಮಾತನಾಡಿದ್ದಕ್ಕಾಗಿ ಆಡಳಿತ ಪಕ್ಷವನ್ನು ಖರ್ಗೆ ಗುರಿಯಾಗಿಸಿಕೊಂಡಿದ್ದಾರೆ. ಭಾರತದ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳದ್ದ ವಿರೋಧ ಪಕ್ಷದ್ದು 'ಇಟಾಲಿಯನ್ ಸಂಸ್ಕೃತಿ' ಎಂದು ಶಾ ಟೀಕಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com