ಕೇಂದ್ರದಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ರಾಜ್ಯದ ಸ್ಥಾನಮಾನ: ಸಿಎಂ ಸ್ಟಾಲಿನ್

ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್
ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್

ಪುದುಚೇರಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವಿ. ವೈಥಿಲಿಂಗಂ ಪರ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್, ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಕಾಂಗ್ರೆಸ್ ಮತ್ತು ಡಿಎಂಕೆ ಬದ್ಧವಾಗಿವೆ ಎಂದರು.

ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್
ತಮಿಳುನಾಡು: ಬಿಜೆಪಿ ಅಭ್ಯರ್ಥಿ ಬೆಂಬಲಿಗರು ಎನ್ನಲಾದ ಮೂವರಿಂದ 3.90 ಕೋಟಿ ರೂ. ವಶ

ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಕೇಂದ್ರದ ಕೈಗೊಂಬೆಯಾಗಿದ್ದಾರೆ. ತಮಿಳುನಾಡುನಂತಹ ದೊಡ್ಡ ರಾಜ್ಯಗಳ ಹಕ್ಕುಗಳಷ್ಟೇ ಅಲ್ಲ. ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶಗಳ ಹಕ್ಕುಗಳನ್ನೂ ರಕ್ಷಿಸಬೇಕಾಗಿದೆ ಎಂದು ಅವರು ಹೇಳಿದರು.

ಕೇಂದ್ರದಲ್ಲಿ 10 ವರ್ಷಗಳ ಬಿಜೆಪಿ ಆಡಳಿತಾವಧಿಯಲ್ಲಿ ಪುದುಚೇರಿ ಏನೂ ಪಡೆದಿಲ್ಲ. ನರೇಂದ್ರ ಮೋದಿ ಅವರು ಕೇವಲ ಧರ್ಮ, ಜಾತಿ ಹೆಸರಿನಲ್ಲಿ ಪ್ರಚಾರ ಮಾಡುತ್ತಾರೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ದುರ್ಬಲ ವರ್ಗದವರ ಕಲ್ಯಾಣಕ್ಕೆ ಏನನ್ನೂ ಮಾಡಿಲ್ಲ ಎಂದು ಟೀಕಿಸಿದರು.

ಇತ್ತೀಚಿಗೆ ಪುದುಚೇರಿಯಲ್ಲಿ 9 ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಸ್ಟಾಲಿನ್, ಕೇಂದ್ರಾಡಳಿತ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ.ಮೋದಿ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com