Lok Sabha Election 2024: ಮಣಿಪುರದ 24,500 ಮಂದಿಗೆ ಆಶ್ರಯ ಶಿಬಿರದಿಂದಲೇ ಮತದಾನ ಮಾಡಲು ವ್ಯವಸ್ಥೆ

ಜನಾಂಗೀಯ ಗಲಭೆ ಬಳಿಕ ನಿರಾಶ್ರಿತ ಶಿಬಿರಗಳಲ್ಲಿರುವ ಸುಮಾರು 24,500 ಮಂದಿ ಹಾಲಿ ಲೋಕಸಭಾ ಚುನಾವಣೆಯಲ್ಲಿ ಶಿಬಿರದಿಂದಲೇ ಮತ ಚಲಾಯಿಸಲು ಅನುವು ಮಾಡಿಕೊಡಲಾಗುತ್ತದೆ ಎಂದು ಹೇಳಲಾಗಿದೆ.
Manipur relief camps
ಮಣಿಪುರ ಶಿಬಿರ
Updated on

ಇಂಫಾಲ: ಜನಾಂಗೀಯ ಗಲಭೆ ಬಳಿಕ ನಿರಾಶ್ರಿತ ಶಿಬಿರಗಳಲ್ಲಿರುವ ಸುಮಾರು 24,500 ಮಂದಿ ಹಾಲಿ ಲೋಕಸಭಾ ಚುನಾವಣೆಯಲ್ಲಿ ಶಿಬಿರದಿಂದಲೇ ಮತ ಚಲಾಯಿಸಲು ಅನುವು ಮಾಡಿಕೊಡಲಾಗುತ್ತದೆ ಎಂದು ಹೇಳಲಾಗಿದೆ.

ಮುಖ್ಯ ಚುನಾವಣಾಧಿಕಾರಿ ಪ್ರದೀಪ್ ಕುಮಾರ್ ಝಾ ಈ ಬಗ್ಗೆ ಮಾಹಿತಿ ನೀಡಿದ್ದು, 'ಸ್ಥಳಾಂತರಗೊಂಡ 24,500ಕ್ಕೂ ಹೆಚ್ಚು ಜನರು ಮತದಾನದ ಹಕ್ಕಿಗೆ ಅರ್ಹರಾಗಿದ್ದಾರೆ. ಅವರಿಗೆ ಆಶ್ರಯ ಶಿಬಿರಗಳಿಂದಲೇ ತಮ್ಮ ಮತದಾನದ ಹಕ್ಕು ಚಲಾಯಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ' ಎಂದು ತಿಳಿಸಿದ್ದಾರೆ.

Manipur relief camps
ಮಣಿಪುರ: ಮನೆಯಲ್ಲಿದ್ದ ಸೇನಾ ಜೆಸಿಒ ಅಪಹರಣ, ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ಅಂತೆಯೇ ಸ್ಥಳಾಂತರಗೊಂಡಿರುವ ಜನರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಆಶ್ರಯ ಶಿಬಿರಗಳಲ್ಲಿ ಮತಗಟ್ಟೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಲೋಕಸಭೆ ಚುನಾವಣೆಗಾಗಿ ರಾಜ್ಯದಲ್ಲಿ ಒಟ್ಟು 2,955 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇವುಗಳಲ್ಲಿ ಶೇ 50ರಷ್ಟು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸ್ಥಳಾಂತರಗೊಂಡ ಜನರಿಗೆ ಮತದಾನ ಮಾಡಲು 94 ವಿಶೇಷ ಮತಗಟ್ಟೆಗಳನ್ನು ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. ಚುನಾವಣೆ ಭದ್ರತೆಗಾಗಿ 200ಕ್ಕೂ ಹೆಚ್ಚು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Manipur relief camps
ಮಣಿಪುರ: ಐಆರ್‌ಬಿ ಕ್ಯಾಂಪ್‌ನಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದ ಆರು ಮಂದಿ ಬಂಧನ!

ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ಆರಂಭವಾಗಿದ್ದ ಸಂಘರ್ಷದಲ್ಲಿ ಈವರೆಗೆ ಕನಿಷ್ಠ 219 ಮಂದಿ ಮೃತಪಟ್ಟಿದ್ದಾರೆ. ಮನೆಗಳನ್ನು ತೊರೆದಿರುವ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು, ವಿವಿಧ ಜಿಲ್ಲೆಗಳಲ್ಲಿ ತೆರೆಯಲಾಗಿರುವ ಆಶ್ರಯ ಶಿಬಿರಗಳಲ್ಲಿ ನೆಲೆಸಿದ್ದಾರೆ.

ಅಂದಹಾಗೆ ಲೋಕಸಭೆಯ ಎರಡು ಕ್ಷೇತ್ರಗಳಿರುವ ಮಣಿಪುರದಲ್ಲಿ ಏಪ್ರಿಲ್ 19 ಹಾಗೂ 26ರಂದು ಮತದಾನ ನಡೆಯಲಿದೆ. ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com