ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್!

ಪಕ್ಷದ ಪ್ರಣಾಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿರುವುದರ ಬಗ್ಗೆ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗದ ಮೊರೆ ಹೋಗಿದೆ.
congress
ಕಾಂಗ್ರೆಸ್online desk
Updated on

ನವದೆಹಲಿ: ಪಕ್ಷದ ಪ್ರಣಾಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿರುವುದರ ಬಗ್ಗೆ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗದ ಮೊರೆ ಹೋಗಿದೆ. ಲೋಕಸಭಾ ಚುನಾವಣೆ 2024 (Loksabha Elections 2024) ಗೆ ಕಾಂಗ್ರೆಸ್ ಪ್ರಕಟಿಸಿರುವ ಪ್ರಣಾಳಿಕೆಯನ್ನು ಮೋದಿ ಮುಸ್ಲಿಂ ಲೀಗ್ ಪ್ರಣಾಳಿಕೆಗೆ ಹೋಲಿಕೆ ಮಾಡಿದ್ದರು.

ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ ಹಲವು ವಿಷಯದ ಬಗ್ಗೆ ಅಪಸ್ವರವೆತ್ತಿದೆ. ಸರ್ಕಾರಿ ಕಟ್ಟಡಗಳಲ್ಲಿ, ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ಕಟೌಟ್ ಗಳು ಇರುವುದರ ಬಗ್ಗೆ ಕಾಂಗ್ರೆಸ್ ಆಕ್ಷೇಪಿಸಿದೆ ಮುಂಬರುವ ಸಂಸತ್ತಿನ ಚುನಾವಣೆಯಲ್ಲಿ ಸಮಬಲ ಸಾಧಿಸಲು ಅವುಗಳನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.

congress
ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆ ಮೇಲಿನ ಕಾಂಗ್ರೆಸ್ ಬ್ಯಾನರ್ ನಲ್ಲಿ ಬಿಜೆಪಿ ಸಂಸದನ ಫೋಟೋ!

ತನ್ನ ಪ್ರಣಾಳಿಕೆ ದೇಶವನ್ನು ವಿಭಜಿಸಲು ಮತ್ತು ಮುಸ್ಲಿಂ ಲೀಗ್‌ನ ಸ್ವಾತಂತ್ರ್ಯಪೂರ್ವ ಸಿದ್ಧಾಂತವನ್ನು ಹೇರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದಕ್ಕಾಗಿ ಮೋದಿ ವಿರುದ್ಧ ಪಕ್ಷ ದೂರು ದಾಖಲಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಕಾಂಗ್ರೆಸ್ ನ ಪ್ರಣಾಳಿಕೆಯ ಪ್ರತಿಯೊಂದು ಪುಟವೂ ಭಾರತವನ್ನು ತುಂಡು ತುಂಡಾಗಿ ಒಡೆಯುತ್ತದೆ. ಕಾಂಗ್ರೆಸ್ ಪ್ರಣಾಳಿಕೆ ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ. "ಇದು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ ಮತ್ತು ಉಳಿದಿರುವುದು ಸಂಪೂರ್ಣವಾಗಿ ಎಡಪಂಥೀಯರ ಪ್ರಾಬಲ್ಯವಾಗಿದೆ" ಎಂದು ಮೋದಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com