ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ನಿಂದ ಮಂಗಳವಾರ ತೀರ್ಪು ಪ್ರಕಟ

ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಮಂಗಳವಾರ ತೀರ್ಪು ಪ್ರಕಟಿಸಲಿದೆ.

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಮಂಗಳವಾರ ತೀರ್ಪು ಪ್ರಕಟಿಸಲಿದೆ.

ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಪ್ರಿಲ್ 3 ರಂದು ತನ್ನ ಆದೇಶ ಕಾಯ್ದಿರಿಸಿತ್ತು.

ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾಕಾಂತ ಶರ್ಮಾ ಅವರು ನಾಳೆ ಮಧ್ಯಾಹ್ನ 2:30 ಕ್ಕೆ ತೀರ್ಪು ಪ್ರಕಟಿಸಲಿದ್ದಾರೆ. ಅವರು ಕೇಜ್ರಿವಾಲ್ ಮತ್ತು ಇಡಿಯಿಂದ ವಿವರವಾದ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ್ದರು.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ನಾಯಕರಿಂದ ಉಪವಾಸ ಸತ್ಯಾಗ್ರಹ

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ನಿರಪರಾಧಿ ಎಂದು ಹೇಳಿದ್ದು, ತನ್ನ ಬಂಧನದ ಸಮಯವು ಚುನಾವಣೆಗೆ ಮುನ್ನ ತಮ್ಮ ಪಕ್ಷವನ್ನು 'ಹಾಳು ಮಾಡುವ' ಪ್ರಯತ್ನ ಎಂದು ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದರು.

ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಸೋಮವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com