'ಮೋದಿ ಕಿ ಗ್ಯಾರಂಟಿ' ಎಂದರೆ ಚುನಾವಣೆ ಬಳಿಕ ಪ್ರತಿಪಕ್ಷಗಳ ನಾಯಕರ ಜೈಲಿಗಟ್ಟುವುದು: ಮಮತಾ ಬ್ಯಾನರ್ಜಿ

ಮೋದಿ ಕಿ ಗ್ಯಾರಂಟಿ' ಎಂದರೆ ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಪ್ರತಿಪಕ್ಷ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿದೆ ಎಂದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Updated on

ಕೋಲ್ಕತ್ತಾ: 'ಮೋದಿ ಕಿ ಗ್ಯಾರಂಟಿ' ಎಂದರೆ ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಪ್ರತಿಪಕ್ಷ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿದೆ ಎಂದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.

ಬಂಕುರಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೂನ್ 4 ರ ನಂತರ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಇದರ ಅರ್ಥ ಲೋಕಸಭೆ ಚುನಾವಣೆ ನಂತರ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿದೆ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆಯು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆಯೇ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರಕ್ಕೆ ಭೇಟಿ ನೀಡಿದೆ. ಪ್ರಧಾನಿ ಮೋದಿಯವರು ಅವರು ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳಕ್ಕೆ ಬರುತ್ತಿದ್ದಾರೆ. ಅವರ ಆಗಮನದಿಂದ ನನಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ, ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಪ್ರತಿಪಕ್ಷಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಹೇಳಿಕೆ ರೀತಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಸ್ಥಾನದಲ್ಲಿದ್ದವರು ಈ ರೀತಿ ಮಾತನಾಡಬಹುದೇ? ಚುನಾವಣೆಯ ನಂತರ ಬಿಜೆಪಿ ನಾಯಕರನ್ನು ಜೈಲಿಗೆ ಹಾಕುತ್ತೇನೆ ಎಂದು ನಾನು ಹೇಳಿದರೆ ಹೇಗಿರುತ್ತದೆ? ಆದರೆ, ಪ್ರಜಾಪ್ರಭುತ್ವದಲ್ಲಿ ಇದು ಸ್ವೀಕಾರಾರ್ಹವಲ್ಲ. ಈ ರೀತಿ ನಾನು ಹೇಳುವುದಿಲ್ಲ. ಜೂನ್ 4 ರ ನಂತರ ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುವುದೇ ನಿಜವಾದ ಮೋದಿ ಕಿ ಗ್ಯಾರಂಟಿ ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಬಿಜೆಪಿ ಸೇರದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ; ಟಿಎಂಸಿ ನಾಯಕರಿಗೆ ತನಿಖಾ ಸಂಸ್ಥೆಗಳಿಂದ ಬೆದರಿಕೆ: ಮಮತಾ ಬ್ಯಾನರ್ಜಿ

ಜಲ್ಪೈಗುರಿಯಲ್ಲಿ ಭಾನುವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು, ನಾವು ಭ್ರಷ್ಟಾಚಾರ ತೊಡೆದುಹಾಕಿ ಎಂದು ಹೇಳಿದರೆ, ಪ್ರತಿಪಕ್ಷಗಳು ಭ್ರಷ್ಟರನ್ನು ಉಳಿಸಿ ಎಂದು ಹೇಳುತ್ತವೆ, ಜೂನ್ 4 ರ ನಂತರ ಭ್ರಷ್ಟರ ವಿರುದ್ಧ ಮತ್ತಷ್ಟು ಕಠಿಣ ಕ್ರಮಗಳ ಕೈಗೊಳ್ಳಲಾಗುವುದು. ಇದು ಮೋದಿ ಕಿ ಗ್ಯಾರಂಟಿ ೆಂದು ಹೇಳಿದ್ದರು.

2022ರಲ್ಲಿ ಪಶ್ಚಿಮ ಬಂಗಾಳದ ಪುರ್ಬಾ ಮೇದಿನ್‌ಪುರ ಜಿಲ್ಲೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತನ್ನು ಬಂಧಿಸಲು ಎನ್ಐಎ ಪೂರ್ವ ಮಿಡ್ನಾಪುರ ಜಿಲ್ಲೆಗೆ ಭೇಟಿ ನೀಡಿತ್ತು. ಈ ವೇಳೆ ಜನರ ಗುಂಪು ಅಧಿಕಾರಿಗಳು ಮೇಲೆ ದಾಳಿ ನಡೆಸಿತ್ತು ಎಂದು ಆರೋಪಿಸಲಾಗಿದೆ. ಆದರೆ, ಅಧಿಕಾರಿಗಳ ವಿರುದ್ಧವೇ ಮಮತಾ ಬ್ಯಾನರ್ಜಿ ಕಿಡಿಕಾರಿದ್ದು, ಎನ್ಐಎ ಅಧಿಕಾರಿಗಳು ಹಲವಾರು ಮನೆಗಳಿಗೆ ನುಗ್ಗಿದೆ, ಈ ವೇಳೆ ಆತ್ಮ ರಕ್ಷಣೆಗೆ ಗ್ರಾಮಸ್ಥರು ಪ್ರತಿರೋಧ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com