CAA ಜಾರಿಯಿಂದ ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ: ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ

ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಯಿಂದ ದೇಶದ ಯಾವೊಬ್ಬ ಪ್ರಜೆ ಕೂಡ ಪೌರತ್ವ ಕಳೆದುಕೊಳ್ಳುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಸಚಿವ ರಾಜನಾಥ್ ಸಿಂಗ್
ಕೇಂದ್ರ ಸಚಿವ ರಾಜನಾಥ್ ಸಿಂಗ್

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಯಿಂದ ದೇಶದ ಯಾವೊಬ್ಬ ಪ್ರಜೆ ಕೂಡ ಪೌರತ್ವ ಕಳೆದುಕೊಳ್ಳುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪೌರತ್ವ (ತಿದ್ದುಪಡಿ) ಕಾಯ್ದೆ CAAಯ ಅನುಷ್ಠಾನದಿಂದ ಯಾವುದೇ ಭಾರತೀಯ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ. ಸಿಎಎ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ.

ಕೇಂದ್ರ ಸಚಿವ ರಾಜನಾಥ್ ಸಿಂಗ್
CAA ಭಯ: ಪಶ್ಚಿಮ ಬಂಗಾಳದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಏಪ್ರಿಲ್ 19 ರ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿ ಕೆಪಿ ರಾಮಲಿಂಗಂ ಅವರನ್ನು ಬೆಂಬಲಿಸಿ ತಮಿಳುನಾಡಿನ ನಾಮಕ್ಕಲ್‌ನಲ್ಲಿ ರೋಡ್ ಶೋ ನಡೆಸಿದ ನಂತರ ಮಾತನಾಡಿದ ರಾಜನಾಥ್ ಸಿಂಗ್ ಅವರು, 'ಪಶ್ಚಿಮ ತಮಿಳುನಾಡಿನ ಒಂದು ಪಟ್ಟಣ, ನಾಮಕ್ಕಲ್ ರಾಜ್ಯದ ರಾಜಧಾನಿ ಚೆನ್ನೈನಿಂದ ಸುಮಾರು 400 ಕಿಮೀ ದೂರದಲ್ಲಿದೆ.

ಬಿಜೆಪಿ ಯಾವಾಗಲೂ ತಾನು ಭರವಸೆ ನೀಡಿದ್ದನ್ನು ಜಾರಿಗೆ ತಂದಿದೆ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, 370 ನೇ ವಿಧಿ ರದ್ದತಿ ಮತ್ತು ಸಿಎಎ ಅಂತಹ ಭರವಸೆಗಳಾಗಿವೆ ಎಂದು ಹೇಳಿದರು.

ಇದೇ ವೇಳೆ "ನಾವು ಪೌರತ್ವ ಕಾಯ್ದೆಯ ಭರವಸೆ ನೀಡಿದ್ದೆವು ಮತ್ತು ನಾವು ಅದನ್ನು ಜಾರಿ ಮಾಡಿದ್ದೇವೆ. ಭಾರತದ ಯಾವುದೇ ಪ್ರಜೆ - ಅವರು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ ಅಥವಾ ಯಹೂದಿಯಾಗಿರಲಿ - ಯಾರ ಪೌರತ್ವವೂ ಹೋಗುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಡಿಎಂಕೆ ಮತ್ತು ಕಾಂಗ್ರೆಸ್ ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿವೆ ಎಂದು ರಾಜನಾಥ್ ಸಿಂಗ್ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com