ಪ್ರತಿಕೂಲ ಹವಾಮಾನ: ಟೇಕಾಫ್ ಆಗದ ರಾಹುಲ್ ಗಾಂಧಿ ಹೆಲಿಕಾಪ್ಟರ್‌, ಮಧ್ಯ ಪ್ರದೇಶದಲ್ಲೇ ರಾತ್ರಿ ವಾಸ್ತವ್ಯ

ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಅವರು ಸೋಮವಾರ ರಾತ್ರಿ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ತಂಗಲಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಶಹದೋಲ್: ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಅವರು ಸೋಮವಾರ ರಾತ್ರಿ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ತಂಗಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರು ಇಂದು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮಧ್ಯ ಪ್ರದೇಶಕ್ಕೆ ತೆರಳಿದ್ದು, ಏಪ್ರಿಲ್ 26 ರಂದು ಮತದಾನ ನಡೆಯಲಿರುವ ಮಂಡ್ಲಾ ಮತ್ತು ಶಹದೋಲ್‌ನಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು.

"ಶಹದೋಲ್‌ನಲ್ಲಿ ಕೆಟ್ಟ ಹವಾಮಾನದಿಂದಾಗಿ ಅವರ ಹೆಲಿಕಾಪ್ಟರ್ ಟೇಕಾಫ್ ಆಗಲಿಲ್ಲ. ರಾಹುಲ್ ಗಾಂಧಿ ಅವರು ಜಬಲ್‌ಪುರಕ್ಕೆ ತೆರಳಬೇಕಿತ್ತು ಮತ್ತು ಅಲ್ಲಿಂದ ದೆಹಲಿಗೆ ತೆರಳಬೇಕಿತ್ತು" ಎಂದು ಮಧ್ಯ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ಅವರು ಪಿಟಿಐಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್‌ಸಿ/ಎಸ್‌ಟಿ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ಜಮೆ: ರಾಹುಲ್ ಗಾಂಧಿ

"ಈಗ, ಅವರು ರಾತ್ರಿ ಶಹದೋಲ್‌ನಲ್ಲಿರುವ ಹೋಟೆಲ್‌ನಲ್ಲಿ ತಂಗುತ್ತಾರೆ ಮತ್ತು ಮಂಗಳವಾರ ಬೆಳಗ್ಗೆ 6 ಗಂಟೆಗೆ ಹೊರಡುತ್ತಾರೆ" ಎಂದು ಪಟ್ವಾರಿ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com