ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್‌ಸಿ/ಎಸ್‌ಟಿ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ಜಮೆ: ರಾಹುಲ್ ಗಾಂಧಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಸಿಯೋನಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹೊಸ ಸರ್ಕಾರ, ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರ ಖಾತೆಗಳಿಗೆ ವಾರ್ಷಿಕ 1 ಲಕ್ಷ ರೂ. ಜಮೆ ಮಾಡಲಿದೆ ಎಂದರು.

ಮಂಡ್ಲಾ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಸಿಯೋನಿ ಜಿಲ್ಲೆಯ ಧನೋರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಿರುದ್ಯೋಗಿ ಯುವಕರಿಗೆ ಅಪ್ರೆಂಟಿಸ್‌ಶಿಪ್‌ಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತೆಗೆದುಕೊಂಡ ಮೂರ್ನಾಲ್ಕು ಕ್ರಾಂತಿಕಾರಿ ಕ್ರಮಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಎಸ್‌ಸಿ ಮತ್ತು ಎಸ್‌ಟಿ ವರ್ಗಗಳ ಮಹಿಳೆಯರು, ಹಿಂದುಳಿದ ವರ್ಗಗಳು ಮತ್ತು ಬಡ ಕುಟುಂಬಗಳ ಮಹಿಳೆಯರ(ಬ್ಯಾಂಕ್) ಖಾತೆಗಳಿಗೆ 1 ಲಕ್ಷ ರೂ.ಗಳನ್ನು ನೇರವಾಗಿ ವರ್ಗಾಯಿಸಲಾಗುವುದು. ಈ ಮೂಲಕ ನಾವು ಪ್ರತಿ ತಿಂಗಳು ಅವರ ಖಾತೆಗಳಿಗೆ ಸಾವಿರಾರು ರೂಪಾಯಿಗಳನ್ನು ಜಮೆ ಮಾಡುತ್ತೇವೆ" ಎಂದು ಹೇಳಿದರು.

ರಾಹುಲ್ ಗಾಂಧಿ
ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯ ಪತ್ರ' ಬಿಡುಗಡೆ!: ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ, ಕೃಷಿ ಸಾಲ ಮನ್ನಾ ಸೇರಿ ಹಲವು ಭರವಸೆ!

ಹಾಲಿ ಸಂಸದ ಮತ್ತು ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ವಿರುದ್ಧ ಕಾಂಗ್ರೆಸ್ ಮಾಜಿ ಸಚಿವ ಮತ್ತು ಶಾಸಕ ಓಂಕಾರ್ ಸಿಂಗ್ ಮಾರ್ಕಮ್ ಅವರನ್ನು ಮಂಡ್ಲಾ ಕ್ಷೇತ್ರದಿಂದ ಕಾಂಗ್ರೆಸ್ ಕಣಕ್ಕಿಳಿಸಿದೆ.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ ಹಣವನ್ನು ದ್ವಿಗುಣಗೊಳಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಎಂದು ಗಾಂಧಿ ಹೇಳಿದರು.

"ದೇಶದ ಪ್ರತಿಯೊಬ್ಬ ನಿರುದ್ಯೋಗಿ ಯುವಕರು ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಾವು ಹೊಸ ಕಾನೂನು ಜಾರಿಗೆ ತರುತ್ತೇವೆ. ಈ ತರಬೇತಿ ಅವಧಿಯಲ್ಲಿ ಅವರು ಒಂದು ಲಕ್ಷ ರೂಪಾಯಿ ಭತ್ಯೆಯಾಗಿ ಪಡೆಯುತ್ತಾರೆ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com