ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 23ರವರೆಗೆ ಮಂಗಳವಾರ ವಿಸ್ತರಿಸಿದೆ.
ಬಿಆರ್ ಎಸ್ ನಾಯಕಿ ಕವಿತಾ
ಬಿಆರ್ ಎಸ್ ನಾಯಕಿ ಕವಿತಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 23ರವರೆಗೆ ಮಂಗಳವಾರ ವಿಸ್ತರಿಸಿದೆ.

ಈ ಹಿಂದೆ ನೀಡಲಾಗಿದ್ದ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಕವಿತಾ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು.

ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳುಮಾಡುವ ಪ್ರಯತ್ನಗಳನ್ನು ಉಲ್ಲೇಖಿಸಿ, ಇ.ಡಿ ಕವಿತಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿದೆ.

ನ್ಯಾಯಾಲಯದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕವಿತಾ, ಇದು ಸಂಪೂರ್ಣ ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಮಾಡಿರುವ ಪ್ರಕರಣ ಇದಾಗಿದೆ. ಸಿಬಿಐ ಈಗಾಗಲೇ ನನ್ನ ಹೇಳಿಕೆಯನ್ನು ಜೈಲಿನಲ್ಲಿ ದಾಖಲಿಸಿಕೊಂಡಿದೆ ಎಂದರು.

ಬಿಆರ್ ಎಸ್ ನಾಯಕಿ ಕವಿತಾ
ದೆಹಲಿ ಅಬಕಾರಿ ನೀತಿ ಹಗರಣ: BRS ನಾಯಕಿ ಕೆ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಣೆ

ಸೋಮವಾರ ಅದೇ ನ್ಯಾಯಾಲಯ ಆಕೆಗೆ ಮಧ್ಯಂತರ ಜಾಮೀನು ನಿರಾಕರಿಸಿತ್ತು. ಮಗನ ಪರೀಕ್ಷೆಯ ಹಿನ್ನೆಲೆಯಲ್ಲಿ ತಾಯಿಯಾಗಿ ಆತನೊಂದಿಗೆ ಇರಬೇಕು ಎಂದು ಕವಿತಾ ಜಾಮೀನು ಕೋರಿದ್ದರು.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ಬೆಂಬಲಿಗರ ಪ್ರತಿಭಟನೆಯ ನಡುವೆ 46 ವರ್ಷದ ಕವಿತಾ ಅವರನ್ನು ಮಾರ್ಚ್ 15ರಂದು ಅವರ ಬಂಜಾರಾ ಹಿಲ್ಸ್ ನಿವಾಸದಿಂದ ಇಡಿ ಅಧಿಕಾರಿಗಳು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com