ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ ದೆಹಲಿ ಸಿಎಂ

ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಈಗ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಡಿ ಸಂಗ್ರಹಿಸಿದ ಸಾಕ್ಷ್ಯಗಳು ಅರವಿಂದ್ ಕೇಜ್ರಿವಾಲ್ ಇತರರೊಂದಿಗೆ ಪಿತೂರಿ ನಡೆಸಿರುವುದನ್ನು ಬಹಿರಂಗಪಡಿಸುತ್ತದೆ. ಗೋವಾ ಚುನಾವಣೆಯಲ್ಲಿ ಹವಾಲಾ ಹಣ ಬಳಕೆಯಾಗಿದೆ ಎಂಬುದಕ್ಕೆ ಜಾರಿ ನಿರ್ದೇಶನಾಲಯ ಸಾಕ್ಷ್ಯಾಧಾರಗಳನ್ನು ನೀಡಿದೆ. ಹೀಗಾಗಿ ಕೇಜ್ರಿವಾಲ್ ಬಂಧನ ಕಾನೂನಿಗೆ ವಿರುದ್ಧವಾಗಿಲ್ಲ, ರಿಮಾಂಡ್ ಅನ್ನು ಅಕ್ರಮ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ.

ಅರವಿಂದ್ ಕೇಜ್ರಿವಾಲ್
Delhi HighCourt: ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸದ್ಯಕ್ಕಿಲ್ಲ ರಿಲೀಫ್; ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ನಿರಪರಾಧಿ ಎಂದು ಹೇಳಿದ್ದು, ತನ್ನ ಬಂಧನದ ಸಮಯವು ಚುನಾವಣೆಗೆ ಮುನ್ನ ತಮ್ಮ ಪಕ್ಷವನ್ನು 'ಹಾಳು ಮಾಡುವ' ಪ್ರಯತ್ನ ಎಂದು ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದರು.

ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಸೋಮವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com