ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಸುರ್ಜೇವಾಲಾಗೆ ಚುನಾವಣಾ ಆಯೋಗದಿಂದ ನೋಟಿಸ್

ಸಂಸದೆ ಹೇಮಾ ಮಾಲಿನಿ ವಿರುದ್ಧ 'ಅವಹೇಳನಕಾರಿ, ಅನಾಗರಿಕ ಮತ್ತು ಅಸಭ್ಯ' ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ರಣದೀಪ್ ಸುರ್ಜೇವಾಲಾ-ಹೇಮಮಾಲಿನಿ
ರಣದೀಪ್ ಸುರ್ಜೇವಾಲಾ-ಹೇಮಮಾಲಿನಿ

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದೆ ಹೇಮಾ ಮಾಲಿನಿ ವಿರುದ್ಧ 'ಅವಹೇಳನಕಾರಿ, ಅನಾಗರಿಕ ಮತ್ತು ಅಸಭ್ಯ' ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಆಯೋಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಮ್ಮ ನಾಯಕರು ಸಾರ್ವಜನಿಕ ಭಾಷಣದ ಸಮಯದಲ್ಲಿ ಮಹಿಳೆಯರ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯುವ ಕುರಿತ ತನ್ನ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ಸುರ್ಜೇವಾಲಾ ಹಾಗೂ ಖರ್ಗೆ ಇಬ್ಬರೂ ತಮ್ಮ ಪ್ರತಿಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ರಣದೀಪ್ ಸುರ್ಜೇವಾಲಾ-ಹೇಮಮಾಲಿನಿ
ಧರ್ಮೇಂದ್ರ ಜೊತೆ ವಾಸಿಸುತ್ತಿಲ್ಲ ನಟಿ ಹೇಮಾಮಾಲಿನಿ: ವೈವಾಹಿಕ ಜೀವನದ ಬಗ್ಗೆ 'ಡ್ರೀಮ್ ಗರ್ಲ್' ಹೇಳಿದ್ದೇನು?

ಏಪ್ರಿಲ್ 11ರ ಸಂಜೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಸುರ್ಜೇವಾಲಾ ಅವರಿಗೆ ಸೂಚಿಸಿದ್ದರೆ, ಖರ್ಗೆ ಅವರಿಗೆ ಮರುದಿನ ಸಂಜೆಯವರೆಗೂ ಕಾಲಾವಕಾಶ ನೀಡಲಾಗಿದೆ.

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸುರ್ಜೇವಾಲಾ ಅವರು, ನಟಿ-ರಾಜಕಾರಣಿಯ ಬಗ್ಗೆ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು.

ಹರಿಯಾಣದ ಚುನಾವಣಾ ಪ್ರಚಾರದ ವೇಳೆ ಹೇಮಾ ಮಾಲಿನಿ ವಿರುದ್ಧ 'ಅಶ್ಲೀಲ ಮತ್ತು ಅವಹೇಳನಕಾರಿ ಹೇಳಿಕೆ' ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಆದಾಗ್ಯೂ, ದಿನಾಂಕವಿಲ್ಲದ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ತಿರುಚಲಾಗಿದೆ. ಬಿಜೆಪಿ ಸಂಸದೆಯನ್ನು ಅವಮಾನಿಸುವ ಅಥವಾ ನೋಯಿಸುವ ಉದ್ದೇಶ ತಮಗೆ ಇಲ್ಲ ಎಂದು ಸುರ್ಜೇವಾಲಾ ಅವರು ಹೇಳಿದ್ದಾರೆ.

ಹೇಮಾ ಮಾಲಿನಿ ಅವರ ಸೌಂದರ್ಯದ ಕಾರಣಕ್ಕಾಗಿಯೇ ಅವರನ್ನು ಸಂಸದೆಯನ್ನಾಗಿ ಆಯ್ಕೆ ಮಾಡಲಾಗಿದೆ. ಲೋಕಸಭೆಯಲ್ಲಿ ಸಂಸದರು ಆಕೆಯನ್ನೇ ನೋಡುತ್ತಿರುತ್ತಾರೆ ಎಂದು ಸುರ್ಜೇವಾಲಾ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com