ಆಹ್ವಾನ ತಿರಸ್ಕರಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶ್ರೀರಾಮನನ್ನು ಅವಮಾನಿಸಿವೆ: ಪ್ರಧಾನಿ ನರೇಂದ್ರ ಮೋದಿ

ಈ ವರ್ಷದ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸದೆ ಇಂಡಿಯಾ ಮೈತ್ರಿಕೂಟದ ನಾಯಕರು ಶ್ರೀರಾಮನನ್ನು ಅವಮಾನಿಸಿದ್ದಾರೆ ಮತ್ತು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಲ್ಲಿ ಎಷ್ಟು ಮುಳುಗಿದೆ ಎಂದರೆ ಅವರು ಎಂದಿಗೂ ಅದರಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದರು.
ಪಿಲಿಭಿತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಪಿಲಿಭಿತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
Updated on

ಪಿಲಿಭಿತ್ (ಉತ್ತರ ಪ್ರದೇಶ): ಈ ವರ್ಷದ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸದೆ ಇಂಡಿಯಾ ಮೈತ್ರಿಕೂಟದ ನಾಯಕರು ಶ್ರೀರಾಮನನ್ನು ಅವಮಾನಿಸಿದ್ದಾರೆ ಮತ್ತು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಲ್ಲಿ ಎಷ್ಟು ಮುಳುಗಿದೆ ಎಂದರೆ ಅವರು ಎಂದಿಗೂ ಅದರಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದರು.

ಪಿಲಿಭಿತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನದು, ಅವರ ಸ್ವಂತದ್ದಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗಳ ಕುರಿತು ಈಗಾಗಲೇ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪಿಲಿಭಿತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್!

ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಜನರು ಕೊಡುಗೆ ನೀಡಿದ್ದಾರೆ. ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾ ಸಮಾರಂಭ ಜನವರಿ 22 ರಂದು ನಡೆಯಿತು. ಇಂಡಿಯಾ ಮೈತ್ರಿಕೂಟದ ಪಕ್ಷಗಳು ರಾಮಮಂದಿರ ನಿರ್ಮಾಣವನ್ನು ಯಾವಾಗಲೂ ದ್ವೇಷಿಸುತ್ತವೆ. ರಾಮ ಪ್ರಾಣ ಪ್ರತಿಷ್ಠಾಪನೆಗೆ ಸಂಘಟಕರು ಗೌರವಯುತವಾಗಿ ಆಹ್ವಾನಿಸಿದಾಗ, ನೀವು (ವಿಪಕ್ಷ ನಾಯಕರು) ಆಹ್ವಾನವನ್ನು ತಿರಸ್ಕರಿಸಿ ಶ್ರೀರಾಮನನ್ನು ಅವಮಾನಿಸಿದಿರಿ. ಸಮಾರಂಭದಲ್ಲಿ ಪಾಲ್ಗೊಂಡ ಅವರ ಪಕ್ಷದವರೇ ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಂಡಿದ್ದಾರೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಲ್ಲಿ ಮುಳುಗಿದ್ದು, ಅದರಿಂದ ಹೊರಬರಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

ಪಾಪ ಮಾಡಿದವರನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ತುಷ್ಟೀಕರಣದ ರಾಜಕೀಯದಿಂದಾಗಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿವೆ. ನೆರೆಯ ದೇಶಗಳಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಭಾರತವು ಪೌರತ್ವವನ್ನು ನೀಡದಿದ್ದರೆ, ಬೇರೆ ಯಾರು ನೀಡುತ್ತಾರೆ? ಎಂದು ಪ್ರಶ್ನಿಸಿದರು.

ಪಿಲಿಭಿತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಬಿಜೆಪಿ 'ಒಡೆದು ಆಳುವ' ರಾಜಕೀಯ ಮಾಡುತ್ತಿದೆ: ಪ್ರಧಾನಿ ಮೋದಿ 'ಮುಸ್ಲಿಂ ಲೀಗ್' ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

'ದೇಶದ ಹಲವೆಡೆ ಇಂದು ಹೊಸ ವರ್ಷಾಚರಣೆ ನಡೆಯುತ್ತಿದೆ. ಇಂದಿನಿಂದ ಚೈತ್ರ ನವರಾತ್ರಿಯೂ ಆರಂಭವಾಗಿದೆ. ಎಲ್ಲರೂ ಭಕ್ತಿಯಲ್ಲಿ ಮುಳುಗಿ 'ಶಕ್ತಿ'ಯನ್ನು ಆರಾಧಿಸುತ್ತಿರುವಾಗ ರ್‍ಯಾಲಿಗೆ ಇಷ್ಟು ದೊಡ್ಡ ಮಟ್ಟದ ಬೆಂಬಲ ಸಿಕ್ಕಿರುವುದು ವಿಸ್ಮಯವಾಗಿದೆ. ನೀವೆಲ್ಲರೂ ನಮಗೆ ನಿಮ್ಮ ಆಶೀರ್ವಾದವನ್ನು ನೀಡಲು ಇಲ್ಲಿಗೆ ಬಂದಿದ್ದೀರಿ. ಸಂದೇಶವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಮಾತ್ರ ಕೇಳಬೇಕು ಅದೇನೆಂದರೆ, 'ಫಿರ್ ಏಕ್ ಬಾರ್, ಮೋದಿ ಸರ್ಕಾರ' ಎಂದು ಅವರು ಹೇಳಿದರು.

ವರುಣ್ ಗಾಂಧಿ ಬದಲಿಗೆ ಉತ್ತರ ಪ್ರದೇಶದ ಲೋಕೋಪಯೋಗಿ ಸಚಿವ ಜಿತಿನ್ ಪ್ರಸಾದ್ ಅವರನ್ನು ಬಿಜೆಪಿ ಪಿಲಿಭಿತ್ ನಿಂದ ಕಣಕ್ಕಿಳಿಸಿದೆ. ಪಿಲಿಭಿತ್‌ನಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com