ದೆಹಲಿ ಅಬಕಾರಿ ನೀತಿ ಹಗರಣ: ಕೆಸಿಆರ್ ಪುತ್ರಿ ಕೆ. ಕವಿತಾ ಬಂಧಿಸಿದ ಸಿಬಿಐ!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (CBI) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾರನ್ನು ಇಂದು ಬಂಧಿಸಿದೆ.
ಕೆ ಕವಿತಾ
ಕೆ ಕವಿತಾPTI
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (CBI) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾರನ್ನು ಇಂದು ಬಂಧಿಸಿದೆ.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸದ್ಯ ತಿಹಾರ್ ಜೈಲಿನಲ್ಲಿದ್ದ ಕವಿತಾರನ್ನು ಅಲ್ಲಿಂದ ಸಿಬಿಐ ಬಂಧಿಸಿದೆ. ಆಕೆಯ ಬಂಧನದ ನಂತರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಲಾಗುವುದು.

ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆದು ಜೈಲು ಪ್ರವೇಶಿಸಿದ್ದು ಕವಿತಾರನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಕವಿತಾ ಅವರು ಸಹ ಆರೋಪಿಗಳ ಫೋನ್‌ನಿಂದ ವಶಪಡಿಸಿಕೊಂಡ ಭೂ ವ್ಯವಹಾರಕ್ಕೆ ಸಂಬಂಧಿಸಿದ ವಾಟ್ಸಾಪ್ ಚಾಟ್‌ಗಳು ಮತ್ತು ದಾಖಲೆಗಳ ಬಗ್ಗೆ ಪ್ರಶ್ನಿಸಲಾಯಿತು. ಅಬಕಾರಿ ನೀತಿಯನ್ನು ಬದಲಾಯಿಸಲು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿ ಲಂಚ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕನನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಅಧಿಕಾರಿಗಳು ಶನಿವಾರ ತಿಹಾರ್ ಜೈಲಿಗೆ ತೆರಳಿದ್ದರು ಎಂದು ವರದಿಯಾಗಿದೆ.

ಕೆ ಕವಿತಾ
ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಕವಿತಾರ ನಿವಾಸದಿಂದ ಇಡಿ ಅವರನ್ನು ಬಂಧಿಸಿತ್ತು. ಅಲ್ಲದೆ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಲಾಗಿದೆ. ಇಡಿ ನ್ಯಾಯಾಲಯದ ಮುಂದೆ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದಾರೆ. ಅಲ್ಲದೆ ಸಾಕ್ಷ್ಯವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದೆ.

ಕೆ ಕವಿತಾ ಅವರು ಆಮ್ ಆದ್ಮಿ ಪಕ್ಷದ ನಾಯಕರೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು ಇಡಿ ಹೇಳಿಕೊಂಡಿದೆ. ಇದರ ಅಡಿಯಲ್ಲಿ ದೆಹಲಿ ಮದ್ಯ ನೀತಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಎಎಪಿ ನಾಯಕರಿಗೆ ಸುಮಾರು 100 ಕೋಟಿ ರೂ. ಕೆ ಕವಿತಾ ಲಂಚ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಇದುವರೆಗೆ ದೇಶಾದ್ಯಂತ 245 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿನ್ಹಾ ಮತ್ತು ವಿಜಯ್ ನಾಯರ್ ಸೇರಿದಂತೆ 15 ಜನರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com