ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಶುಕ್ರವಾರ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ.
ಆರೋಪಿಗಳಾದ ಶಾಜೀಬ್ ಮತ್ತು ತಾಹಾ
ಆರೋಪಿಗಳಾದ ಶಾಜೀಬ್ ಮತ್ತು ತಾಹಾ

ಕೊಲ್ಕತ್ತಾ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಶುಕ್ರವಾರ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ.

ಬಂಧಿತ ಆರೋಪಿಗಳಾದ ಮುಸಾವಿರ್​ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್​ ತಾಹಾನನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ರಾಷ್ಟ್ರೀಯ ತನಿಖಾ ಸಂಸ್ಥೆಯ ಮನವಿ ಮೇರೆಗೆ ಸಿಟಿ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ಗೆ ಅನುಮತಿ ನೀಡಿದ್ದಾರೆ. ಕೋರ್ಟ್ ನಿಂದ ವಶಕ್ಕೆ ಪಡೆದು ಆರೋಪಿಗಳನ್ನು ಎನ್​​ಐಎ ತಂಡ ಬೆಂಗಳೂರಿಗೆ ಕರೆತರಲಿದೆ ಎನ್ನಲಾಗಿದೆ.

ಆರೋಪಿಗಳಾದ ಶಾಜೀಬ್ ಮತ್ತು ತಾಹಾ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಕೊನೆಗೂ ಸಿಕ್ಕಿಬಿದ್ದ ಖಾನ್‌ಗ್ರೆಸ್ ಬ್ರದರ್ಸ್!

ಆರೋಪಿಗಳನ್ನು ಕೋಲ್ಕತ್ತಾದಿಂದ 190 ಕಿಮೀ ದೂರದಲ್ಲಿರುವ ಪುರ್ಬಾ ಮೇದಿನಿಪುರ್ ಜಿಲ್ಲೆಯ ಕಡಲತೀರದ ಪ್ರವಾಸಿ ಪಟ್ಟಣ ದಿಘಾದಲ್ಲಿರುವ ಹೋಟೆಲ್‌ನಿಂದ ಬಂಧಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. ತಾಹಾ ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಆಗಿದ್ದು, ಶಾಜಿಬ್ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com