ಏಪ್ರಿಲ್ 14 ರಂದು ದೇಶಾದ್ಯಂತ 'ಸಂವಿಧಾನ ಉಳಿಸಿ, ಸರ್ವಾಧಿಕಾರ ತೊಲಗಿಸಿ' ದಿನ ಆಚರಿಸಲು APP ನಿರ್ಧಾರ

ಏಪ್ರಿಲ್ 14 ರಂದು ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನದಂದು ಆಮ್ ಆದ್ಮಿ ಪಕ್ಷ ದೇಶಾದ್ಯಂತ 'ಸಂವಿಧಾನ ಉಳಿಸಿ, ಸರ್ವಾಧಿಕಾರ ತೊಲಗಿಸಿ ದಿನ ಆಚರಿಸಲಿದೆ.
ಗೋಪಾಲ್ ರೈ
ಗೋಪಾಲ್ ರೈ

ನವದೆಹಲಿ: ಏಪ್ರಿಲ್ 14 ರಂದು ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನದಂದು ಆಮ್ ಆದ್ಮಿ ಪಕ್ಷ ದೇಶಾದ್ಯಂತ 'ಸಂವಿಧಾನ ಉಳಿಸಿ, ಸರ್ವಾಧಿಕಾರ ತೊಲಗಿಸಿ ದಿನ ಆಚರಿಸಲಿದೆ ಎಂದು ಎಎಪಿ ನಾಯಕ ಮತ್ತು ದೆಹಲಿ ಸಚಿವ ಗೋಪಾಲ್ ರೈ ಅವರು ಶನಿವಾರ ಹೇಳಿದ್ದಾರೆ.

ನಾಳೆ ಪಕ್ಷದ ಕಾರ್ಯಕರ್ತರು ಸಂವಿಧಾನದ ಪೀಠಿಕೆಯನ್ನು ಓದುತ್ತಾರೆ ಮತ್ತು ಸಂವಿಧಾನ ಉಳಿಸುವ ಪ್ರತಿಜ್ಞೆ ಮಾಡಲಿದ್ದಾರೆ ಎಂದು ರೈ ತಿಳಿಸಿದ್ದಾರೆ.

ಇಲ್ಲಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ. ಇದನ್ನು ಎದುರಿಸಲು ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.

ಗೋಪಾಲ್ ರೈ
ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಮೇಲ್ಮನವಿ: ಏಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ

"ಭಾನುವಾರ, ನಾವು ಒಂದು ದಿನದ ಕಾರ್ಯಕ್ರಮವನ್ನು ನಡೆಸುತ್ತೇವೆ-'ಸಂವಿಧಾನ ಉಳಿಸಿ, ಸರ್ವಾಧಿಕಾರ ತೊಲಗಿಸಿ' ದಿನ ಆಚರಿಸಲಾಗುವುದು. ಎಎಪಿ ಕಾರ್ಯಕರ್ತರು ತಮ್ಮ ರಾಜ್ಯಗಳಲ್ಲಿನ ಪಕ್ಷದ ಕಚೇರಿಗಳಲ್ಲಿ ಜಮಾಯಿಸಿ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಪ್ರತಿಜ್ಞೆ ಮಾಡಲಿದ್ದಾರೆ" ಎಂದು ಅವರು ಹೇಳಿದರು.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಲಹೆ ಮೇರೆಗೆ ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ರೈ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com