ಸಿಎಂ ಜಗನ್ ಮೋಹನ್ ರೆಡ್ಡಿ
ದೇಶ
ವಿಜಯವಾಡ: ರೋಡ್ ಶೋ ವೇಳೆ ಕಲ್ಲು ಎಸೆತ, ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ
ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಬಿರುಸು ಪಡೆಯುತ್ತಿರುವಂತೆಯೇ ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗಳು ವರದಿಯಾಗುತ್ತಿವೆ.
ವಿಜಯವಾಡ: ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಬಿರುಸು ಪಡೆಯುತ್ತಿರುವಂತೆಯೇ ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗಳು ವರದಿಯಾಗುತ್ತಿವೆ. ನೆರೆಯ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಶನಿವಾರ ಸಂಜೆ ರೋಡ್ ಶೋ ವೇಳೆಯಲ್ಲಿ ದುಷ್ಕರ್ಮಿಗಳು ತೂರಿದ ಕಲ್ಲಿನಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾಯಗೊಂಡಿದ್ದಾರೆ.
ಮೇಮಂತ ಸಿದ್ದಂ" ಬಸ್ ಯಾತ್ರೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಎಡಗಣ್ಣಿನ ಮೇಲ್ಬಾಗದಲ್ಲಿ ಗಾಯವಾಗಿರುವ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಸಿಎಂ ಜಗನ್ ಬಸ್ ಯಾತ್ರೆಯನ್ನು ಮುಂದುವರೆಸಿದ್ದಾರೆ. ಈ ಘಟನೆ ಹಿಂದೆ ಎದುರಾಳಿ ಟಿಡಿಪಿ ಪಕ್ಷದ ಕೈವಾಡವಿದೆ ಎಂದು ವೈಎಸ್ ಆರ್ ಪಿ ನಾಯಕರು ಆರೋಪಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ