ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಕಂಗನಾ ವಿರುದ್ಧ ವಿಕ್ರಮಾದಿತ್ಯ ಸಿಂಗ್ ಕಣಕ್ಕೆ!

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 16 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ವಿಕ್ರಮಾದಿತ್ಯ ಸಿಂಗ್ ಅವರನ್ನು ಕಣಕ್ಕಿಳಿಸಿದೆ.
ವಿಕ್ರಮಾದಿತ್ಯ ಸಿಂಗ್, ಕಂಗನಾ
ವಿಕ್ರಮಾದಿತ್ಯ ಸಿಂಗ್, ಕಂಗನಾ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 16 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ವಿಕ್ರಮಾದಿತ್ಯ ಸಿಂಗ್ ಅವರನ್ನು ಕಣಕ್ಕಿಳಿಸಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ವಿಕ್ರಮಾದಿತ್ಯ ಸಿಂಗ್ ಪೈಪೋಟಿ ನಡೆಸಲಿದ್ದಾರೆ. ಚಂಡೀಗಢದಿಂದ ಮನೀಶ್ ತಿವಾರಿಗೆ ಟಿಕೆಟ್ ನೀಡಲಾಗಿದೆ. ಇಲ್ಲಿನ ಹಾಲಿ ಸಂಸದ ಕಿರಣ್ ಖೇರ್ ಬದಲಿಗೆ ಸಂಜಯ್ ಟಂಡನ್ ಗೆ ಬಿಜೆಪಿ ಟಿಕೆಟ್ ನೀಡಿದೆ.

ವಿಕ್ರಮಾದಿತ್ಯ ಸಿಂಗ್, ಕಂಗನಾ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರ ಸಾಲ ಮನ್ನಾ- ರಾಹುಲ್ ಗಾಂಧಿ

ರಾಜ್‌ಕೋಟ್ ಲೋಕಸಭಾ ಕ್ಷೇತ್ರದಿಂದ ಪರೇಶ್‌ಭಾಯ್ ಧನಾನಿ, ನವಸಾರಿಯಿಂದ ನೈಶಾದ್ ದೇಸಾಯಿ, ಶಿಮ್ಲಾದಿಂದ ವಿನೋದ್ ಸುಲ್ತಾನ್‌ಪುರಿ ಸೇರಿದಂತೆ 16 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಘೋಷಿಸಿದೆ. ಹಿಮಾಚಲ ಪ್ರದೇಶದ ಮಂಡಿಯಲ್ಲಿ ಹಾಲಿ ಸಂಸದೆ ಪ್ರತಿಭಾ ಸಿಂಗ್ ಬದಲಿಗೆ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರಿಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ಇದರೊಂದಿಗೆ ಇದರೊಂದಿಗೆ ಒಟ್ಟು 259 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ಶನಿವಾರ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಹಿಮಾಚಲ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ದೆಹಲಿಯ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com