ಒಡಿಶಾ: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್, 5 ಮಂದಿ ಪ್ರಯಾಣಿಕರು ಸಾವು, ಹಲವರಿಗೆ ಗಾಯ

ಒಡಿಶಾದ ಜಾಜ್‌ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಸೋಮವಾರ ರಾತ್ರಿ ಮೇಲ್ಸೇತುವೆಯಿಂದ ಬಸ್‌ ಕೆಳಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತಕ್ಕೀಡಾದ ಬಸ್
ಅಪಘಾತಕ್ಕೀಡಾದ ಬಸ್

ಭುವನೇಶ್ವರ: ಒಡಿಶಾದ ಜಾಜ್‌ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಸೋಮವಾರ ರಾತ್ರಿ ಮೇಲ್ಸೇತುವೆಯಿಂದ ಬಸ್‌ ಕೆಳಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 55 ಪ್ರಯಾಣಿಕರಿದ್ದ ಬಸ್ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಹಲ್ದಿಯಾಗೆ ತೆರಳುತ್ತಿದ್ದಾಗ ಅದರ ಚಾಲಕನ ನಿಯಂತ್ರಣ ತಪ್ಪಿದ್ದು, ಜಾಜ್ಪುರ್ ದ ರಸೂಲ್‌ಪುರ ಪ್ರದೇಶದ ಬಾರಾಬತಿ ಚೌಕ್ ಬಳಿಯ ಮೇಲ್ಸೇತುವೆಯಿಂದ ರಾತ್ರಿ 8 ಗಂಟೆ ಸುಮಾರಿನಲ್ಲಿ ಬಿದ್ದಿದೆ ಎಂದು ವರದಿಯಾಗಿದೆ.

ಮಾಹಿತಿ ದೊರೆತ ತಕ್ಷಣವೇ ರಸೂಲ್‌ಪುರ ಮತ್ತು ಚಂಡಿಖೋಲ್ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು ಕ್ರೇನ್‌ಗಳನ್ನು ಬಳಸಲಾಗಿದೆ. ಗಾಯಗೊಂಡ 40 ಪ್ರಯಾಣಿಕರನ್ನು ಧರ್ಮಶಾಲಾದ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಮಧ್ಯೆ 10 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುಧಾರಿತ ಚಿಕಿತ್ಸೆಗಾಗಿ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಪಘಾತದ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಸಂಬಂಧಿಕರಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಪ್ರಕಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com