ಮಣಿಪುರದಲ್ಲಿ ಶಾಂತಿ ಸ್ಥಾಪಿಸುವುದೇ ಕೇಂದ್ರ ಸರ್ಕಾರದ ಆದ್ಯತೆ: ಅಮಿತ್ ಶಾ

ಜನಾಂಗೀಯ ಘರ್ಷಣೆಯಿಂದ ಕಂಗೆಟ್ಟಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಇಂಫಾಲ: ಜನಾಂಗೀಯ ಘರ್ಷಣೆಯಿಂದ ಕಂಗೆಟ್ಟಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.

ಈ ಲೋಕಸಭಾ ಚುನಾವಣೆಯು ಮಣಿಪುರವನ್ನು ಒಡೆಯಲು ಪ್ರಯತ್ನಿಸುತ್ತಿರುವ ಶಕ್ತಿಗಳು ಮತ್ತು ಅದನ್ನು ಒಗ್ಗೂಡಿಸುವ ಶಕ್ತಿಗಳ ನಡುವೆ ನಡೆಯುತ್ತಿದೆ ಎಂದು ಶಾ ಇಂಫಾಲದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

ಈಶಾನ್ಯ ರಾಜ್ಯದಲ್ಲಿ ಜನಸಂಖ್ಯೆಯನ್ನು ಬದಲಾಯಿಸಲು ಒಳನುಸುಳುವಿಕೆಯ ಪ್ರಯತ್ನಗಳು ನಡೆಯುತ್ತಿವೆ. ಮಣಿಪುರದಲ್ಲಿ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಮತ್ತು ರಾಜ್ಯವನ್ನು ಒಡೆಯದೆ ಶಾಂತಿ ಸ್ಥಾಪಿಸುವುದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಶಾ ಹೇಳಿದರು.

ಅಮಿತ್ ಶಾ
ಮಣಿಪುರ: ಮನೆಯಲ್ಲಿದ್ದ ಸೇನಾ ಜೆಸಿಒ ಅಪಹರಣ, ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯ ನಂತರ ಕನಿಷ್ಠ 219 ಜನರು ಸಾವಿಗೀಡಾಗಿದ್ದಾರೆ. ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯ ಒಗ್ಗಟ್ಟಿನ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಮೈತೇಯಿ ಮತ್ತು ಕುಕಿ ಸಮುದಾಯದವರ ನಡುವೆ ಘರ್ಷಣೆ ಆರಂಭವಾಗಿತ್ತು.

ಈಶಾನ್ಯ ಮತ್ತು ಮಣಿಪುರದ ಭವಿಷ್ಯ ಬದಲಾದಾಗ ಮಾತ್ರ ದೇಶದ ಭವಿಷ್ಯ ಬದಲಾಗುತ್ತದೆ. ಮಣಿಪುರದ ಒಳ ಮತ್ತು ಹೊರ ಮಣಿಪುರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವಂತೆ ಶಾ ಜನತೆಗೆ ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com