ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್‌ಗೆ ಹಿನ್ನಡೆ: ಏಪ್ರಿಲ್ 29 ವರೆಗೆ ಜೈಲೇ ಗತಿ; ಇಡಿಗೆ ನೋಟಿಸ್

ದೆಹಲಿ ಮದ್ಯ ನೀತಿ ಹಗರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನೆಡೆಯಾಗಿದೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್TNIE

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನೆಡೆಯಾಗಿದೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಅರವಿಂದ್ ಕೇಜ್ರಿವಾಲ್ ಅರ್ಜಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 24ರೊಳಗೆ ಉತ್ತರ ನೀಡುವಂತೆ ಸೂಚಿಸಿದೆ. ಕೇಜ್ರಿವಾಲ್ ಅವರ ಅರ್ಜಿಯು ಈಗ ತಿಂಗಳ ಕೊನೆಯಲ್ಲಿ ದೇಶದ ಅತಿದೊಡ್ಡ ನ್ಯಾಯಾಲಯದಲ್ಲಿ ಚರ್ಚೆಯಾಗಲಿದೆ.

ಮದ್ಯದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಆರಂಭಿಸಿದೆ. ತಮ್ಮ ಬಂಧನವನ್ನು ಎತ್ತಿ ಹಿಡಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಡಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 24ರೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಕೇಳಿದೆ.

ಅರವಿಂದ್ ಕೇಜ್ರಿವಾಲ್
Delhi HighCourt: ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸದ್ಯಕ್ಕಿಲ್ಲ ರಿಲೀಫ್; ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರಕರಣದ ಶೀಘ್ರ ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು. ಇಡಿಗೆ ನೋಟಿಸ್ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ಕೇಳಿದಾಗ, ಸಿಂಘ್ವಿ ಮುಂದಿನ ವಿಚಾರಣೆಯನ್ನು ಇದೇ ಶುಕ್ರವಾರಕ್ಕೆ ಒತ್ತಾಯಿಸಿದರು. ಜಸ್ಟಿಸ್ ಖನ್ನಾ ಅವರು ಹತ್ತಿರದ ಸಮಯವನ್ನು ನೀಡುವುದಾಗಿ ಹೇಳಿದರು. ಆದರೆ ಸಿಂಘ್ವಿ ಸೂಚಿಸಿದ ದಿನಾಂಕದಂದು ಅದು ಸಾಧ್ಯವಿಲ್ಲ. ನ್ಯಾಯಾಲಯದ ಆತ್ಮವನ್ನು ಅಲುಗಾಡಿಸುವ ಕೆಲವು ಸಂಗತಿಗಳನ್ನು ಪ್ರಸ್ತುತಪಡಿಸಲು ನಾನು ಬಯಸುತ್ತೇನೆ ಎಂದು ಸಿಂಘ್ವಿ ಹೇಳಿದರು. ನ್ಯಾಯಮೂರ್ತಿ ಖನ್ನಾ ಅವರು ಸಿಂಘ್ವಿಗೆ ತಮ್ಮ ವಾದಗಳನ್ನು ಉಳಿಸುವಂತೆ ಕೇಳಿಕೊಂಡರು.

ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಸಿಂಘ್ವಿ ಹೇಳಿದ್ದಾರೆ. ನೋಟಿಸ್ ಜಾರಿ ಮಾಡಿದ ನ್ಯಾಯಮೂರ್ತಿ ಖನ್ನಾ ಅವರು ಏಪ್ರಿಲ್ 29ಕ್ಕೆ ಪಟ್ಟಿ ಮಾಡುವಂತೆ ಸೂಚಿಸಿದರು. ಈ ವೇಳೆ ಸಿಂಘ್ವಿ ಅವರು ಶೀಘ್ರ ವಿಚಾರಣೆಗೆ ಒತ್ತಾಯಿಸಿದಾಗ, ನ್ಯಾಯಾಧೀಶರು ನಿರಾಕರಿಸಿದರು. ಇದು ಸಾಧ್ಯವಾದಷ್ಟು ಬೇಗ ದಿನಾಂಕ ಎಂದು ಹೇಳಿದರು. ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಏಪ್ರಿಲ್ 1ರಂದು ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಲಾಯಿತು. ಅಂದಿನಿಂದ ಅವರು ತಿಹಾರ್‌ಗೆ ಸೀಮಿತವಾಗಿದ್ದಾರೆ. ಕೇಜ್ರಿವಾಲ್ ಅವರ ಬಂಧನ ಕಾನೂನು ಬಾಹಿರ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ನಿರಾಸೆಗೊಂಡು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com