ದೆಹಲಿ ಅಬಕಾರಿ ನೀತಿ ಹಗರಣ: ಏಪ್ರಿಲ್ 22ಕ್ಕೆ ಕವಿತಾ ಜಾಮೀನು ಅರ್ಜಿ ವಿಚಾರಣೆ; ಸಿಬಿಐಗೆ ದೆಹಲಿ ಕೋರ್ಟ್ ನೋಟಿಸ್

ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾಗೆ ಸಂಕಷ್ಟಗಳು ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮದ್ಯ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಕವಿತಾರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿದೆ.
ಕೆ ಕವಿತಾ
ಕೆ ಕವಿತಾPTI

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾಗೆ ಸಂಕಷ್ಟಗಳು ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮದ್ಯ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಕವಿತಾರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿದೆ.

ಸಿಬಿಐ ಕವಿತಾರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಸಿತ್ತು. ಇದರ ನಂತರ, ಏಪ್ರಿಲ್ 12ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅಂದು ನ್ಯಾಯಾಲಯವು ಅವರನ್ನು ಏಪ್ರಿಲ್ 15ರವರೆಗೆ ಸಿಬಿಐ ಕಸ್ಟಡಿಗೆ ನೀಡಿತ್ತು. ಇಂದು ಆಕೆಯ ಕಸ್ಟಡಿ ಮುಗಿದಿದ್ದು, ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಂದು ನ್ಯಾಯಾಲಯ ಅವರನ್ನು ಏಪ್ರಿಲ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಕವಿತಾರನ್ನು ಹೆಚ್ಚಿನ ಕಸ್ಟಡಿ ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದ್ದು, ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕವಿತಾ ಪರ ವಾದ ಮಂಡಿಸಿದ ವಕೀಲ ನಿತೀಶ್ ರಾಣಾ, ಪೊಲೀಸರ ಮನವಿಯನ್ನು ವಿರೋಧಿಸಿ, ಆಕೆಯನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಕಾರಣ ಸಾಕಾಗುವುದಿಲ್ಲ, ಈಗ ಆಕೆಯ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿದರು.

ಸಿಬಿಐ ಅಧಿಕಾರಿಗಳು ಇತ್ತೀಚೆಗೆ ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆದು ಜೈಲಿನೊಳಗೆ ಕವಿತಾ ಅವರನ್ನು ವಿಚಾರಣೆ ನಡೆಸಿದ್ದರು. ಸಹ-ಆರೋಪಿ ಬುಚ್ಚಿ ಬಾಬು ಅವರ ಫೋನ್‌ನಿಂದ ವಶಪಡಿಸಿಕೊಂಡ ವಾಟ್ಸಾಪ್ ಚಾಟ್‌ಗಳು ಮತ್ತು ಭೂ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳ ಬಗ್ಗೆ ಬಿಆರ್‌ಎಸ್ ನಾಯಕನನ್ನು ಪ್ರಶ್ನಿಸಲಾಯಿತು. ನಂತರ ಅವರು ಅಬಕಾರಿ ನೀತಿಯಲ್ಲಿ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಕೋಟಿ ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂಬ ಆರೋಪವಿದೆ.

ಕೆ ಕವಿತಾ
ದೆಹಲಿ ಅಬಕಾರಿ ನೀತಿ ಹಗರಣ: ಕೆಸಿಆರ್ ಪುತ್ರಿ ಕೆ. ಕವಿತಾ ಬಂಧಿಸಿದ ಸಿಬಿಐ!

ಬಂಧನದ ಸಮಯದಲ್ಲಿ ಕವಿತಾರನ್ನು ವಿಚಾರಣೆ ನಡೆಸಲಾಯಿತು. ಕವಿತಾ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಸಿಬಿಐ ಹೇಳಿದೆ. ಅವರು ಉದ್ದೇಶಪೂರ್ವಕವಾಗಿ ದಾಖಲೆಯಲ್ಲಿ ಲಭ್ಯವಿರುವ ಪುರಾವೆಗಳನ್ನು ನಿರಾಕರಿಸುತ್ತಿದ್ದು ಅಸ್ಪಷ್ಟ ಉತ್ತರಗಳನ್ನು ನೀಡಿದ್ದಾರೆ ಎಂದು ಆರೋಪಿಸಿದೆ.

ಏಪ್ರಿಲ್ 22ಕ್ಕೆ ಜಾಮೀನು ಅರ್ಜಿ ವಿಚಾರಣೆ

ಸಿಬಿಐ ಪ್ರಕರಣದಲ್ಲಿ ತನ್ನ ಬಂಧನಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಮುಖಂಡ ಕೆ. ಕವಿತಾ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ವೇಳೆ, ಜಾಮೀನು ಅರ್ಜಿಯ ಪ್ರತಿ ಸಿಕ್ಕಿದೆಯೇ ಎಂದು ಸಿಬಿಐಗೆ ನ್ಯಾಯಾಲಯ ಪ್ರಶ್ನಿಸಿತ್ತು. ಇದಕ್ಕೆ ಸಿಬಿಐ ಈ ಬಗ್ಗೆ ಉತ್ತರವನ್ನು ಸಲ್ಲಿಸಲು ಕಾಲಾವಕಾಶ ಕೇಳಿತ್ತು. ಹೀಗಾಗಿ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಏಪ್ರಿಲ್ 22ಕ್ಕೆ ನಿಗದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com