ರಾಜಸ್ಥಾನ: ಲೋಕಸಭಾ ಚುನಾವಣೆಗೂ ಮುನ್ನ ದಾಖಲೆಯ 800 ಕೋಟಿ ರೂ. ನಗದು, ಮದ್ಯ ವಶ

ಲೋಕಸಭೆ ಚುನಾವಣೆಗೆ ಮುನ್ನ ರಾಜಸ್ಥಾನದಲ್ಲಿ ರೂ. 800 ಕೋಟಿಗೂ ಹೆಚ್ಚು ನಗದು, ಮದ್ಯ, ಬೆಲೆಬಾಳುವ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ವಿವಿಧ ತನಿಖಾ ಸಂಸ್ಥೆಗಳು ವಶಪಡಿಸಿಕೊಂಡಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜೈಪುರ: ಲೋಕಸಭೆ ಚುನಾವಣೆಗೆ ಮುನ್ನ ರಾಜಸ್ಥಾನದಲ್ಲಿ ರೂ. 800 ಕೋಟಿಗೂ ಹೆಚ್ಚು ನಗದು, ಮದ್ಯ, ಬೆಲೆಬಾಳುವ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ವಿವಿಧ ತನಿಖಾ ಸಂಸ್ಥೆಗಳು ವಶಪಡಿಸಿಕೊಂಡಿವೆ.

ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಅಕ್ರಮವಾಗಿ ಮತದಾರರಿಗೆ ಹಂಚಲು ಸಂಗ್ರಹಿಸಲಾಗಿದ್ದ ವಸ್ತುಗಳ ಜಪ್ತಿಯಲ್ಲಿ ರಾಜಸ್ಥಾನವು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ.

ಸಾಂದರ್ಭಿಕ ಚಿತ್ರ
ಮಾದರಿ ನೀತಿ ಸಂಹಿತೆ ಉಲ್ಲಂಘನೆ: 26.68 ಕೋಟಿ ರೂ. ನಗದು, 33 ಕೋಟಿ ರೂ. ಮೌಲ್ಯದ ಮದ್ಯ ವಶ

ಮಾರ್ಚ್ 1ರಿಂದ ಇಲ್ಲಿಯವರೆಗೆ ದಾಖಲೆಯ 812.77 ಕೋಟಿ ರೂ. ಸಂಗ್ರಹಿಸಲಾಗಿದೆ. ಇದರಲ್ಲಿ 36.79 ಕೋಟಿ ರೂಪಾಯಿ ನಗದು, 41.71 ಕೋಟಿ ರೂಪಾಯಿ ಮೌಲ್ಯದ ಮದ್ಯ, 121.79 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್, 49.21 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, 563 ಕೋಟಿ ರೂ. ಗೂ ಹೆಚ್ಚು ಮೌಲ್ಯದ ಉಚಿತ ಕೊಡುಗೆಗಳು ಸೇರಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಪ್ರವೀಣ್ ಗುಪ್ತಾ ಹೇಳಿದ್ದಾರೆ.

ರಾಜ್ಯದ 20 ಜಿಲ್ಲೆಗಳಲ್ಲಿ ತಲಾ 20 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಲೋಕಸಭೆ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ವಶಪಡಿಸಿಕೊಂಡ ಸರಕು ಮತ್ತು ನಗದು ಮೌಲ್ಯ 712 ಕೋಟಿ ರೂ.ಗೂ ಹೆಚ್ಚಿದೆ ಎಂದು ಗುಪ್ತಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com