ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ 29 ಮಾವೋವಾದಿಗಳ ಹತ್ಯೆ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ಲೋಕಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಭೇಟಿಯಾಡಿದ್ದಾರೆ. ಕಾಂಕೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 29 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ಸಾಂದರ್ಭಿಕ ಚಿತ್ರ
ಭದ್ರತಾ ಸಿಬ್ಬಂದಿ ಸಾಂದರ್ಭಿಕ ಚಿತ್ರ

ಕಾಂಕೇರಿ: ಲೋಕಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಭೇಟಿಯಾಡಿದ್ದಾರೆ. ಕಾಂಕೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 29 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ಕಾಳಗದಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದಲ್ಲಿ ಮದ್ದು, ಗುಂಡು ಮತ್ತಿತರ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಛೋಟೆಬೆಥಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿನಗುಂದ ಮತ್ತು ಕೊರೊನಾರ್ ಗ್ರಾಮಗಳ ನಡುವಿನ ಹಪಟೋಲಾ ಅರಣ್ಯದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆ ಮತ್ತು ರಾಜ್ಯದ ಜಿಲ್ಲಾ ಮೀಸಲು ಪಡೆಗಳ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಸಾಂದರ್ಭಿಕ ಚಿತ್ರ
ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್ ಕೌಂಟರ್; ಎಂಟು ಮಂದಿ ನಕ್ಸಲೀಯರ ಹತ್ಯೆ!

ಪ್ರಾಥಮಿಕ ಮಾಹಿತಿಯ ಪ್ರಕಾರ, ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಮೂವರು ಭದ್ರತಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇಲ್ಲಿವರೆಗೂ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಜೊತೆಗೆ ಮಾವೋವಾದಿಗಳ 29 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.

ಮೃತರಲ್ಲಿ ಮಾವೋವಾದಿ ಕಮಾಂಡರ್ ಶಂಕರ್ ರಾವ್ ಸೇರಿದ್ದಾರೆ. ಕಾರ್ಯಾಚರಣೆಯನ್ನು ನಿಖರವಾಗಿ ಯೋಜಿಸಿ, ಕಾರ್ಯಗತಗೊಳಿಸಲಾಗಿದೆ. ಬಿಎಸ್‌ಎಫ್‌ನ ಇನ್ಸ್‌ಪೆಕ್ಟರ್ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಡಿಐಜಿ (ಬಿಎಸ್‌ಎಫ್) ಅಲೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಎನ್‌ಕೌಂಟರ್ ಸ್ಥಳದಿಂದ ಐದು AK-47, ಒಂದು INSAS ಅಸಾಲ್ಟ್ ರೈಫಲ್ ಮತ್ತು ಬೃಹತ್ ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ. “ಪಡೆಗಳು ಇನ್ನೂ ಜಿಲ್ಲಾ ಕೇಂದ್ರಕ್ಕೆ ಮರಳಬೇಕಿದ್ದು, ಈ ಪ್ರದೇಶದಲ್ಲಿ ಮತ್ತಷ್ಟು ಶೋಧ ಕಾರ್ಯಾಚರಣೆ ನಡೆಸಲಾಗುವುದು ಎಂದು ಕಾಂಕರ್ ಎಸ್ಪಿ ಇಂದಿರಾ ಕಲ್ಯಾಣ್ ಎಲೆಸೆಲಾ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಬಸ್ತಾರ್ ಮತ್ತು ಕಂಕೇರ್ ಲೋಕಸಭಾ ಕ್ಷೇತ್ರಗಳಲ್ಲಿ ಕ್ರಮವಾಗಿ ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಸಂಘರ್ಷ ಪೀಡಿತ ಉತ್ತರ ಬಸ್ತಾರ್ ವಲಯದ ಏಳು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಕಾಂಕೇರ್ ಸೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com