ಗೋರಕ್ಷಣೆ, ಗುಂಪು ಹತ್ಯೆ ಘಟನೆ: ಏನು ಕ್ರಮ ಕೈಗೊಂಡಿದ್ದೀರಿ? ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ!

ಗೋರಕ್ಷಣೆ ಮತ್ತು ಗುಂಪು ಹತ್ಯೆ ಘಟನೆಗಳಲ್ಲಿ ಏನು ಕ್ರಮ ಕೈಗೊಂಡಿದ್ದೀರಿ ಎಂದು ವಿವಿಧ ರಾಜ್ಯಗಳನ್ನು ಮಂಗಳವಾರ ಪ್ರಶ್ನಿಸಿದ ಸುಪ್ರೀಂಕೋರ್ಟ್, ಈ ಕುರಿತು ಆರು ವಾರಗಳಲ್ಲಿ ಪ್ರತಿಕ್ರಿಯಿಸಿರುವಂತೆ ಸೂಚಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on

ನವದೆಹಲಿ: ಗೋರಕ್ಷಣೆ ಮತ್ತು ಗುಂಪು ಹತ್ಯೆ ಘಟನೆಗಳಲ್ಲಿ ಏನು ಕ್ರಮ ಕೈಗೊಂಡಿದ್ದೀರಿ ಎಂದು ವಿವಿಧ ರಾಜ್ಯಗಳನ್ನು ಮಂಗಳವಾರ ಪ್ರಶ್ನಿಸಿದ ಸುಪ್ರೀಂಕೋರ್ಟ್, ಈ ಕುರಿತು ಆರು ವಾರಗಳಲ್ಲಿ ಪ್ರತಿಕ್ರಿಯಿಸಿರುವಂತೆ ಸೂಚಿಸಿದೆ.

ಗೋರಕ್ಷಕರಿಂದ ಮುಸ್ಲಿಂರ ಮೇಲಿನ ಗುಂಪು ಹತ್ಯೆ, ಹಿಂಸಾಚಾರದಂತಹ ಘಟನೆಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸಲು 2018 ರ ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಅನುಗುಣವಾಗಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ನಿರ್ದೇಶನಗಳನ್ನು ಕೋರಿ ಮಹಿಳಾ ಸಂಘಟನೆಯೊಂದು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಅರವಿಂದ್ ಕುಮಾರ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠ, ಆರು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ತಿಳಿಸಿತು.

"ಗುಂಪು ಹತ್ಯೆಯ ನಿದರ್ಶನಗಳನ್ನು ನೀಡುವ ರಿಟ್ ಅರ್ಜಿಗೆ ಹೆಚ್ಚಿನ ರಾಜ್ಯಗಳು ತಮ್ಮ ಪ್ರತಿಕ್ರಿಯೆ ಸಲ್ಲಿಸಿಲ್ಲ. ಅಂತಹ ಪ್ರಕರಣಗಳಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ರಾಜ್ಯಗಳು ಕನಿಷ್ಠ ಪ್ರತಿಕ್ರಿಯೆ ನೀಡಬೇಕಾಗಿದೆ. ಪ್ರತಿಕ್ರಿಯೆ ಸಲ್ಲಿಸದ ರಾಜ್ಯಗಳಿಗೆ ಆರು ವಾರಗಳ ಕಾಲಾವಕಾಶ ನೀಡುತ್ತೇವೆ ಮತ್ತು ಅಂತಹ ಪ್ರಕರಣಗಳಲ್ಲಿ ಅವರು ತೆಗೆದುಕೊಂಡ ಕ್ರಮಗಳ ವಿವರಗಳನ್ನು ನೀಡಬೇಕು ಎಂದು ಪೀಠವು ಆದೇಶಿಸಿತು.

ಸುಪ್ರೀಂಕೋರ್ಟ್
ಕೇರಳ: ಯೂಟ್ಯೂಬರ್ ಗುಂಪು ಹತ್ಯೆ, 10 ಮಂದಿ ಬಂಧನ

ಭಾರತೀಯ ಕಮ್ಯುನಿಸ್ಟ್ ಪಕ್ಷಕ್ಕೆ ಸಂಬಂಧಿಸಿದ ಸಂಘಟನೆಯಾದ ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ (ಎನ್‌ಎಫ್‌ಐಡಬ್ಲ್ಯು) ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಕಳೆದ ವರ್ಷ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಮಹಾರಾಷ್ಟ್ರ, ಒರಿಸ್ಸಾ, ರಾಜಸ್ಥಾನ, ಬಿಹಾರ, ಮಧ್ಯ ಪ್ರದೇಶ ಮತ್ತು ಹರಿಯಾಣ ರಾಜ್ಯಗಳ ಡಿಜಿಪಿಗಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com