ಅಹಮದಾಬಾದ್: ಟ್ರಕ್ ಗೆ ಡಿಕ್ಕಿ ಹೊಡೆದ ಕಾರು,10 ಮಂದಿ ದುರ್ಮರಣ

ವಡೋದರಾ-ಅಹಮದಾಬಾದ್ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಅಪಘಾತದ ಚಿತ್ರ
ಅಪಘಾತದ ಚಿತ್ರ

ಅಹಮದಾಬಾದ್: ವಡೋದರಾ-ಅಹಮದಾಬಾದ್ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಕೆಟ್ಟು ನಿಂತಿದ್ದ ಟ್ರಕ್ ಗೆ ಹಿಂದಿನಿಂದ ವೇಗವಾಗಿ ಬಂದ ಇನ್ನೋವಾ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಗಾಜುಗಳು ಪುಡಿಪುಡಿಯಾಗಿದ್ದು, ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ಸಿಲುಕಿಕೊಂಡಿದ್ದ ಶವಗಳನ್ನ ಸ್ಥಳೀಯರ ಸಹಕಾರದಿಂದ ಜಿಲ್ಲಾಡಳಿತದ ಅಧಿಕಾರಿಗಳು ಹೊರ ತೆಗೆದರು. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ದೇಹಗಳನ್ನು ಹಸ್ತಾಂತರಿಸಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದರು.

ಈ ಅಪಘಾತವು ಗುಜರಾತ್‌ನಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಕ್ತಿಸಿಂಗ್ ಗೋಹಿಲ್ ಆರೋಪಿಸಿದ್ದಾರೆ. ನಿಯಮಗಳ ಹೊರತಾಗಿಯೂ, ಖಾಸಗಿ ವಾಹನಗಳು ತಮ್ಮ ಉದ್ದೇಶಿತ ಸಾಮರ್ಥ್ಯವನ್ನು ಮೀರಿ ಪ್ರಯಾಣಿಕರನ್ನು ಸಾಗಿಸುತ್ತಿವೆ. ಸಾರಿಗೆ ಕಾನೂನುಗಳ ಕಟ್ಟುನಿಟ್ಟಿನ ಪಾಲನೆಯನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು, ”ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com