ಪಶ್ಚಿಮ ಬಂಗಾಳ: ಕೂಚ್ ಬೆಹಾರ್‌ಗೆ ಭೇಟಿ ನೀಡುವ ಕುರಿತು ರಾಜ್ಯಪಾಲರಿಗೆ ಚುನಾವಣಾ ಆಯೋಗ ಸಲಹೆ
ಕೊಚ್ ಬೆಹಾರ್: ಮೊದಲ ಹಂತದ ಲೋಕಸಭಾ ಚುನಾವಣೆಯ ಮುನ್ನಾದಿನದಂದು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ರಾಜ್ಯಪಾಲರಿಗೆ ಕೂಚ್ ಬೆಹಾರ್ ಪ್ರವಾಸವನ್ನು ರದ್ದುಗೊಳಿಸುವಂತೆ ಸಲಹೆ ನೀಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಏಪ್ರಿಲ್ 19 ರಂದು ಕೂಚ್ ಬೆಹಾರ್‌ನಲ್ಲಿ ಮತದಾನ ನಡೆಯಲಿದ್ದು, ಇಂದು ಸಂಜೆಯಿಂದ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ರಾಜಕೀಯ ನಾಯಕರು ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ.
ಏಪ್ರಿಲ್ 18 ಮತ್ತು 19 ರಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರು ಕೂಚ್ ಬೆಹಾರ್‌ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದ ನಂತರ, ಉದ್ದೇಶಿತ ಪ್ರವಾಸವನ್ನು ಕೈಗೊಳ್ಳದಂತೆ ಚುನಾವಣಾ ಆಯೋಗ ಸಲಹೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಮಾದರಿ ನೀತಿ ಸಂಹಿತೆಯಡಿ ರಾಜ್ಯಪಾಲರಿಗಾಗಿ ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ಚುನಾವಣಾ ಆಯೋಗ ರಾಜ್ಯಪಾಲರ ಕಚೇರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದೆ. ಏಪ್ರಿಲ್ 18 ಮತ್ತು 19 ರಂದು ಇಡೀ ಜಿಲ್ಲಾಡಳಿತ ಮತ್ತು ಪೊಲೀಸ್ ಪಡೆ ಚುನಾವಣಾ ನಿರ್ವಹಣೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಚುನಾವಣಾ ಆಯೋಗ ಹೇಳಿದೆ.
ಚುನಾವಣಾ ಸಂದರ್ಭದಲ್ಲಿ ರಾಜ್ಯಪಾಲರ ಭೇಟಿಯು ಬೇರೆ ಅರ್ಥಕ್ಕೆ ಕಾರಣವಾಗುತ್ತದೆ. 'ಅನಿರೀಕ್ಷಿತ' ಪ್ರಸ್ತಾವಿತ ಭೇಟಿಗೆ ಪ್ರೋಟೋಕಾಲ್ ಮತ್ತು ಸ್ಥಳೀಯ ಭದ್ರತೆಯನ್ನು ಒದಗಿಸಬೇಕಾಗುತ್ತದೆ. ಪ್ರಜಾಪ್ರತಿನಿಧಿ ಕಾಯಿದೆ 1951 ರ ಸೆಕ್ಷನ್ 126 ರ ಪ್ರಕಾರ, ಕೂಚ್ ಬೆಹಾರ್ ನಲ್ಲಿ ಬಹಿರಂಗ ಪ್ರಚಾರ ಇಂದು ಸಂಜೆಯಿಂದ ಆರಂಭವಾಗಿದೆ. ಇದು ಚುನಾವಣಾ ಅಧಿಕಾರಿಗಳಿಂದ ಹಲವಾರು ನಿರ್ಬಂಧ ಮತ್ತು ಉನ್ನತ ಮಟ್ಟದ ಕ್ರಮಕ್ಕೆ ಕಾರಣವಾಗುತ್ತದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ