ಗುಲಾಂ ನಬಿ ಆಜಾದ್ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಿಪಿಎಪಿ

ಡಿಪಿಎಪಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.
 ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್

ಶ್ರೀನಗರ: ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ(ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರ ಪಕ್ಷ ಬುಧವಾರ ತಿಳಿಸಿದೆ.

ಪಕ್ಷ ಈಗ ತನ್ನ ನಾಯಕ ಮೊಹಮ್ಮದ್ ಸಲೀಮ್ ಪರ್ರೆ ಅವರನ್ನು ಅನಂತನಾಗ್-ರಜೌರಿ ಕ್ಷೇತ್ರದಿಂದ ಕಣಕ್ಕೆ ಇಳಿಸಲು ನಿರ್ಧರಿಸಿದೆ ಎಂದು ಡಿಪಿಎಪಿಯ ಕಾಶ್ಮೀರ ಪ್ರಾಂತೀಯ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್ ಅವರು ಹೇಳಿದ್ದಾರೆ.

ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮಿಯಾನ್ ಅಲ್ತಾಫ್ ಅವರು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

 ಗುಲಾಂ ನಬಿ ಆಜಾದ್
ಬಿಜೆಪಿ ಗೆಲ್ಲಬೇಕೆಂದು ಕಾಂಗ್ರೆಸ್ ಕೂಡ ಬಯಸುತ್ತದೆ ಎಂಬುದು ನನ್ನ ಅನಿಸಿಕೆ: ಗುಲಾಂ ನಬಿ ಆಜಾದ್

ಇಂದು ಅನಂತನಾಗ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಟ್, "ಆಜಾದ್ ಅವರು(ಅನಂತನಾಗ್-ರಾಜೌರಿ ಕ್ಷೇತ್ರದಿಂದ) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆಜಾದ್ ಅವರೊಂದಿಗೆ ಸಭೆ ನಡೆಸಲಾಗಿದ್ದು, ಅನಂತನಾಗ್-ರಜೌರಿ ಸ್ಥಾನಕ್ಕೆ ವಕೀಲ ಸಲೀಮ್ ಪರ್ರೆ ಡಿಪಿಎಪಿ ಅಭ್ಯರ್ಥಿ ಎಂದು ನಿರ್ಧರಿಸಲಾಗಿದೆ" ಎಂದು ತಿಳಿಸಿದರು.

ಆಜಾದ್ ಅವರು ಚುನಾವಣೆಗೆ ಸ್ಪರ್ಧಿಸದಿರಲು ಕೆಲವು ಕಾರಣಗಳಿವೆ ಎಂದ ಡಿಪಿಎಪಿ ನಾಯಕ, ನಾವು ಆ ಕ್ಷೇತ್ರದಿಂದ ಬೆರೆಯವರನ್ನು ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಂಡಿದ್ದೇವೆ" ಎಂದು ಹೇಳಿದರು.

ಏಪ್ರಿಲ್ 2 ರಂದು, ಆಜಾದ್ ಅವರು ಅನಂತನಾಗ್-ರಾಜೌರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಡಿಪಿಎಪಿ ಘೋಷಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com