EVMನಲ್ಲಿ ದಾಖಲಾದ ಮತಗಳನ್ನು VVPAT ಮೂಲಕ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಮೊದಲ ಹಂತದ ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗುವ ಮತಗಳನ್ನು ವೈರಿಫೈಯಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮೂಲಕ ಸಂಪೂರ್ಣ ಪರಿಶೀಲನೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on

ನವದೆಹಲಿ: ಮೊದಲ ಹಂತದ ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗುವ ಮತಗಳನ್ನು ವೈರಿಫೈಯಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮೂಲಕ ಸಂಪೂರ್ಣ ಪರಿಶೀಲನೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಅರ್ಜಿಗಳ ಕುರಿತಂತೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಆಲಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ನೇತೃತ್ವದ ವಿಭಾಗೀಯ ಪೀಠ ತೀರ್ಪನ್ನು ಕಾಯ್ದಿರಿಸಿದೆ. ವಿವಿಪ್ಯಾಟ್ ಯಂತ್ರಗಳಲ್ಲಿನ ಪಾರದರ್ಶಕ ಗಾಜನ್ನು ದಲಾಯಿಸಿ ಅಪಾರದರ್ಶಕ ಗಾಜು ಅಳವಡಿಸಿದ 2017ರ ಚುನಾವಣಾ ಆಯೋಗದ ನಿರ್ಧಾರವನ್ನು ರದ್ದುಗೊಳಿಸುವಂತೆಯೂ ಅರ್ಜಿದಾರರು ಕೋರಿದ್ದಾರೆ. ಬದಲಾದ ಗಾಜಿನ ಮೂಲಕ ಮತದಾರರು ಏಳು ಸೆಕೆಂಡುಗಳ ಕಾಲ ಲೈಟ್ ಆನ್ ಆಗಿರುವಾಗ ಮಾತ್ರ ಮತದಾನ ಮಾಡಿದ ಟಿಯನ್ನು ನೋಡಬಹುದಾಗಿದೆ.

ಸುಪ್ರೀಂಕೋರ್ಟ್
EVM ಮತ್ತು ಕಾಗದದ ಮತಪತ್ರ: ವಿದ್ಯುನ್ಮಾನ ಮತ ಯಂತ್ರ ಬಗ್ಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಮಣಿಂದರ್ ಸಿಂಗ್, ಇವಿಎಂ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ನ್ಯಾಯಾಲಯಕ್ಕೆ ವಿವರಿಸಿದರು. ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಮತ್ತು ಗೋಪಾಲ್ ಶಂಕರನಾರಾಯಣ್ ವಾದ ಮಂಡಿಸಿದ್ದರು. ಏಪ್ರಿಲ್ 16 ರಂದು ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಕುರಿತಾದ ಟೀಕೆಗಳು ಮತ್ತು ಮತ್ತೆ ಮತ ಪತ್ರಗಳ ಮೂಲಕ ಮತದಾನ ನಡೆಸಬೇಕೆಂಬ ಮನವಿಗಳನ್ನು ನ್ಯಾಯಾಲಯ ತಳ್ಳಿ ಹಾಕಿತ್ತು. ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯು ಬೃಹತ್ ಪ್ರಮಾಣದ್ದಾಗಿದ್ದು, ಇರುವ ವ್ಯವಸ್ಥೆಯನ್ನು ಉರುಳಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com