ಲೋಕಸಭಾ ಚುನಾವಣೆ 2024: ಮೊದಲ ಹಂತದ ಮತದಾನ ಆರಂಭ, ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

ದೇಶದ 102 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ದೇಶದ 102 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವಿಶೇಷವಾಗಿ ಯುವಕರು ಹಾಗೂ ಪ್ರಥಮ ಬಾರಿಗೆ ಮತ ಚಲಾಯಿಸುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.

ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ: ನಾಳೆ ಮೊದಲ ಹಂತದ ಮತದಾನ, ಪ್ರತಿಯೊಂದು ಓಟು ನಿರ್ಣಾಯಕ ಎಂದ CEC!

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಇಂದಿನಿಂದ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ದಾಖಲೆ ಸೃಷ್ಟಿಸುವಂತೆ ನಾನು ವಿನಂತಿಸುತ್ತೇನೆ' ಎಂದು ಹೇಳಿದ್ದಾರೆ.

ವಿಶೇಷವಾಗಿ ಮೊದಲ ಬಾರಿಗೆ ಮತ ಚಲಾಯಿಸಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ, ಪ್ರತಿ ಮತವೂ ಅಮೂಲ್ಯವಾಗಿದೆ ಮತ್ತು ಪ್ರತಿ ಧ್ವನಿಯೂ ಮುಖ್ಯವಾಗಿದೆ' ಎಂದು ವಿವಿಧ ಭಾಷೆಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com