ಮಣಿಪುರ: 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ

ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹಿಸಿದೆ.
ಮಣಿಪುರ
ಮಣಿಪುರonline desk

ಮಣಿಪುರ: ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಈ ಮತಗಟ್ಟೆಗಳಲ್ಲಿ ಮತಗಳನ್ನು ರಿಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಗುಂಡು ಹಾರಿಸುವುದು, ಬೆದರಿಸುವಿಕೆ, ಕೆಲವು ಮತಗಟ್ಟೆಗಳಲ್ಲಿ ಇವಿಎಂ ಗಳನ್ನು ಹಾಳುಗೆಡವಿರುವುದು ಮಣಿಪುರದಲ್ಲಿ ವರದಿಯಾಗಿದೆ. ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು ಶೇ.68 ರಷ್ಟು ಮತದಾನ ನಡೆದಿದೆ.

ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಮಾತನಾಡಿ, ಮಣಿಪುರದ ಒಳ ಕ್ಷೇತ್ರದ 36 ಮತ್ತು ಹೊರ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಒತ್ತಾಯಿಸಿ ಮಣಿಪುರ ಮುಖ್ಯ ಚುನಾವಣಾಧಿಕಾರಿಗೆ ಪಕ್ಷವು ದೂರು ನೀಡಿದೆ ಎಂದು ಹೇಳಿದ್ದಾರೆ.

ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕೆಲವು ದಿನಗಳಿಂದ ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಮತ್ತು ಪಕ್ಷದ ಚುನಾವಣಾ ಏಜೆಂಟರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮೇಘಚಂದ್ರ ಹೇಳಿದ್ದಾರೆ.

ಮರು ಮತದಾನದ ಬೇಡಿಕೆಯು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ವಿಧಾನಸಭಾ ಕ್ಷೇತ್ರವಾದ ಹೀಂಗಾಂಗ್ ಅಡಿಯಲ್ಲಿ ಮೂರು ಮತಗಟ್ಟೆಗಳನ್ನು ಒಳಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com