ಲೋಕಸಭಾ ಚುನಾವಣೆ: ವಯನಾಡು ಕಾಂಗ್ರೆಸ್ ಅಭ್ಯರ್ಥಿ ಸೋಲು ನಿಶ್ಚಿತ- ಪ್ರಧಾನಿ ಮೋದಿ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಸೋಲಲಿದ್ದು, ಆ ನಂತರ ಸುರಕ್ಷಿತ ಸ್ಥಾನವನ್ನು ಹುಡುಕಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನಾಂದೇಡ್: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಸೋಲಲಿದ್ದು, ಆ ನಂತರ ಸುರಕ್ಷಿತ ಸ್ಥಾನವನ್ನು ಹುಡುಕಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತದ ಲೋಕಸಭಾ ಚುನಾವಣೆ ಸಂಬಂಧ ಲಭ್ಯವಿರುವ ಮಾಹಿತಿಯು ಏನ್ ಡಿಎ ಪರವಾಗಿ ಏಕಪಕ್ಷೀಯವಾಗಿರುವುದನ್ನು ಸೂಚಿಸಿದೆ.

ರಾಹುಲ್ ಗಾಂಧಿ ಅಮೇಥಿ ಸೋತ ನಂತರ ವಯನಾಡನ್ನು ಕಳೆದುಕೊಳ್ಳಲಿದ್ದಾರೆ. ಏಪ್ರಿಲ್ 26 ರ ನಂತರ ಸುರಕ್ಷಿತ ಸ್ಥಾನವನ್ನು ಹುಡುಕಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ ಸೋನಿಯಾ ಗಾಂಧಿ ಉಲ್ಲೇಖಿಸಿ ಮಾತನಾಡಿದ ಮೋದಿ, ಕೆಲವು ಇಂಡಿಯಾ ಮೈತ್ರಿಕೂಟದ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸಲು ಧೈರ್ಯವಿಲ್ಲದ ಕಾರಣ ಲೋಕಸಭೆ ತೊರೆದು ರಾಜ್ಯಸಭೆಗೆ ತೆರಳಿದ್ದಾರೆ. ‘‘ಇದೇ ಮೊದಲ ಬಾರಿಗೆ ಆ ಕುಟುಂಬಸ್ಥರು ವಾಸಿಸುವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವುದಿಲ್ಲ, ಏಕೆಂದರೆ ಅಲ್ಲಿ ಪಕ್ಷದ ಅಭ್ಯರ್ಥಿಯೇ ಇಲ್ಲ ಎಂದರು.

ಕಾಂಗ್ರೆಸ್ ಆಡಳಿತದ ಕೆಟ್ಟ ಆಡಳಿತವನ್ನು ಸರಿಪಡಿಸಲು 10 ವರ್ಷಗಳನ್ನು ಕಳೆದಿದ್ದೇನೆ. ಬಹಳಷ್ಟು ಕೆಲಸಗಳನ್ನು ಮಾಡಬೇಕಾಗಿದೆ. ರೈತರು ಮತ್ತು ಬಡವರ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಿಯಾಗಿದೆ. "ಕೃಷಿ ಬಿಕ್ಕಟ್ಟು ಈಗ ಸಂಭವಿಸಿಲ್ಲ, ಇದು ಕಾಂಗ್ರೆಸ್ ನ ದೋಷಪೂರಿತ ನೀತಿಗಳಿಂದಾಗಿ ಸಂಭವಿಸಿದೆ" ಎಂದು ಮೋದಿ ಹೇಳಿದರು.

ಪ್ರಧಾನಿ ಮೋದಿ
I.N.D.I.A ಒಕ್ಕೂಟ ಗೆಲ್ಲುವುದಿಲ್ಲ ಎಂಬುದು ರಾಹುಲ್ ಗಾಂಧಿಗೂ ತಿಳಿದಿರುವ ಬಹಿರಂಗ ಸತ್ಯ: ವಿಜಯೇಂದ್ರ (ಸಂದರ್ಶನ)

ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ನಾಯಕರಿಲ್ಲ, ದೇಶದ ಭವಿಷ್ಯವನ್ನು ಯಾರು ಮುನ್ನೆಡಸಬೇಕು ಎಂದು ಅವರಿಗೆ ತಿಳಿದಿಲ್ಲ. ಅವರು ಏನು ಬೇಕಾದರೂ ಹೇಳಿಕೊಳ್ಳಬಹುದು, ಆದರೆ ವಾಸ್ತವವೆಂದರೆ ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com