ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಸಿಜೆಐ ಚಂದ್ರಚೂಡ್ ಶ್ಲಾಘನೆ

ಹೊಸದಾಗಿ ಪರಿಚಯಿಸಲಾಗಿರುವ ಕ್ರಿಮಿನಲ್ ಕಾನೂನುಗಳು ಸಮಾಜದ ದಿಕ್ಕನ್ನು ಬದಲಿಸುತ್ತವೆ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.
ಸಿಜೆಐ ಚಂದ್ರಚೂಡ್
ಸಿಜೆಐ ಚಂದ್ರಚೂಡ್ online desk

ಹೊಸದಾಗಿ ಪರಿಚಯಿಸಲಾಗಿರುವ ಕ್ರಿಮಿನಲ್ ಕಾನೂನುಗಳು ಸಮಾಜದ ದಿಕ್ಕನ್ನು ಬದಲಿಸುತ್ತವೆ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾ.ಚಂದ್ರಚೂಡ್, ಭಾರತ ತನ್ನ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಕಾಣಲು ಸಿದ್ಧವಿದೆ, ನಾವು ಪ್ರಜೆಗಳನ್ನು ಅದನ್ನು ಅಳವಡಿಸಿಕೊಂಡಲ್ಲಿ ಮಾತ್ರ ಅವುಗಳು ಯಶಸ್ವಿಯಾಗಲಿದೆ ಎಂದು ನ್ಯಾ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.

ಹೊಸದಾಗಿ ಜಾರಿಗೆ ತಂದ ಕಾನೂನುಗಳು ಅಪರಾಧ ನ್ಯಾಯದ ಕುರಿತ ಭಾರತದ ಕಾನೂನು ಚೌಕಟ್ಟನ್ನು ಹೊಸ ಯುಗಕ್ಕೆ ಪರಿವರ್ತಿಸಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿಜೆಐ ಚಂದ್ರಚೂಡ್
ಬಾಕಿ ಇರುವ ಪ್ರಕರಣ, ತೀರ್ಪುಗಳ ಬಗ್ಗೆ ವಕೀಲರ ಅಭಿಪ್ರಾಯಗಳು ತೀವ್ರ ಬೇಸರ ತರಿಸಿದೆ: ಸಿಜೆಐ ಚಂದ್ರಚೂಡ್

ಬಲಿಪಶುಗಳ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಅಪರಾಧಗಳ ತನಿಖೆ ಮತ್ತು ಕಾನೂನು ಕ್ರಮವನ್ನು ಸಮರ್ಥವಾಗಿ ಕೈಗೊಳ್ಳಲು ಹೆಚ್ಚು ಅಗತ್ಯವಿರುವ ಸುಧಾರಣೆಗಳನ್ನು ಪರಿಚಯಿಸಲಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಹೊಸದಾಗಿ ಜಾರಿಗೆ ತಂದ ಕಾನೂನುಗಳು -- ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಜುಲೈ 1 ರಿಂದ ಜಾರಿಗೆ ಬರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com