ಅಬಕಾರಿ ಪ್ರಕರಣದಲ್ಲಿ ಇಡಿ ಸಮನ್ಸ್: ದೆಹಲಿ ಹೈಕೋರ್ಟ್ ನಲ್ಲಿ ನಾಳೆ ಕೇಜ್ರಿವಾಲ್ ಅರ್ಜಿ ವಿಚಾರಣೆ

ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲ ನೀಡಿರುವ ಸಮನ್ಸ್‌ಗಳನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಸಿಎಂ ಕೇಜ್ರಿವಾಲ್
ಸಿಎಂ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲ ನೀಡಿರುವ ಸಮನ್ಸ್‌ಗಳನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ನಂತರ ಮಾರ್ಚ್ 21 ರಂದು ಇಡಿಯಿಂದ ಬಂಧನಕ್ಕೊಳಗಾಗಿರುವ ಕೇಜ್ರಿವಾಲ್, ಬಂಧನ, ವಿಚಾರಣೆ ಮತ್ತು ಜಾಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ.

ಸಿಎಂ ಕೇಜ್ರಿವಾಲ್
ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಗೆ 15 ದಿನ ನ್ಯಾಯಾಂಗ ಬಂಧನ

ಕಾಯ್ದೆಯ ಕೆಲವು ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ. ಈ ಅರ್ಜಿಯು ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಮತ್ತು ನ್ಯಾಯಮೂರ್ತಿ ಮನೋಜ್ ಜೈನ್ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.

ಮಾರ್ಚ್ 21 ರಂದು ಹಾಜರಾಗುವಂತೆ ಇಡಿ ಒಂಬತ್ತನೇ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಮಾರ್ಚ್ 20 ರಂದು ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್ ಪೀಠವು ಇಡಿಗೆ ಸೂಚಿಸಿತ್ತು. ಮರುದಿನ ಈ ಹಂತದಲ್ಲಿ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಲು ಒಲವು ಹೊಂದಿಲ್ಲ ಎಂದು ಹೇಳುವ ಮೂಲಕ ಬಂಧನದಿಂದ ರಕ್ಷಣೆ ಕೋರಿ ಕೇಜ್ರಿವಾಲ್ ಮಾಡಿದ ಮನವಿಗೆ ಪ್ರತಿಕ್ರಿಯಿಸುವಂತೆ ಇಡಿಗೆ ಸೂಚಿಸಿತ್ತು. ಅದೇ ದಿನ ಸಂಜೆ ಇಡಿಯಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com