Naxal Encounter: ಛತ್ತೀಸ್‌ಗಢದಲ್ಲಿ ನಕ್ಸಲ್ ಎನ್‌ಕೌಂಟರ್; ಓರ್ವ ಮಾವೋವಾದಿ ಹತ
ಬಿಜಾಪುರ: ನಕ್ಸಲ್ ಪೀಡಿತ ಛತ್ತೀಸ್‌ಗಢದಲ್ಲಿ ಮತ್ತೊಂದು ಸೇನಾ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಮಾವೋವಾದಿಯನ್ನು ಹತಗೊಳಿಸಲಾಗಿದೆ.
ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಭೈರಮ್‌ಗಢ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶ್‌ಕುತುಲ್ ಗ್ರಾಮದ ಬಳಿಯ ಅರಣ್ಯದಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ನಕ್ಸಲ್ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ರಾಜಧಾನಿ ರಾಯ್‌ಪುರದಿಂದ 400 ಕಿ.ಮೀ. ದೂರದಲ್ಲಿರುವ ಕೇಶ್‌ಕುತುಲ್-ಕೇಶ್‌ಮುಂಡಿ ಅರಣ್ಯದಲ್ಲಿ ಮಾವೋವಾದಿ ಕಮಾಂಡರ್ ಕವಾಸಿ ಪಂಡರು ಮತ್ತು 15-20 ಮಂದಿಯ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತನಾಗಿದ್ದಾನೆ. ಎನ್‌ಕೌಂಟರ್ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದೆ ಎಂದು ಅವರು ಹೇಳಿದ್ದಾರೆ.
ಅಂದಹಾಗೆ ಛತ್ತೀಸ್‌ಗಢದಲ್ಲಿ ಈ ವರ್ಷ ಇದುವರೆಗೆ 80 ನಕ್ಸಲರು ವಿವಿಧ ಕಾರ್ಯಾಚರಣೆಯಲ್ಲಿ ಹತರಾಗಿದ್ದು, ಏಪ್ರಿಲ್ 16ರಂದು ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 29 ಮಂದಿ ನಕ್ಸಲರನ್ನು ಹತ್ಯೆ ಮಾಡಿವೆ ಎಂದು ದತ್ತಾಂಶಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ