ಲೋಕಸಭಾ ಚುನಾವಣೆಗೂ ಮೊದಲೇ ಖಾತೆ ತೆರೆದ ಬಿಜೆಪಿ: ಸೂರತ್ ಕ್ಷೇತ್ರದ ಅಭ್ಯರ್ಥಿ ಅವಿರೋಧ ಆಯ್ಕೆ

ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.
ಮುಖೇಶ್ ದಲಾಲ್
ಮುಖೇಶ್ ದಲಾಲ್

ಸೂರತ್: ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಯಾಗಿದೆ. ಗುಜರಾತ್‌ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ. ಚುನಾವಣೆಗೂ ಮುನ್ನವೇ ಸೂರತ್‌ ಕ್ಷೇತ್ರದಲ್ಲಿ ಬಿಜೆಪಿ ಖಾತೆಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ನಿನ್ನೆ ಸೂರತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ಫಾರಂ ಕೂಡ ರದ್ದಾಗಿದೆ. ಅದರ ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗಾಗಿ ಮುಖೇಶ್​ ದಲಾಲ್ ಅವಿರೋಧವಾಗಿ ಸಂಸದನಾಗಿ ಆಯ್ಕೆಯಾಗಿದ್ದಾರೆ.

ಈ ವಿಷಯವನ್ನು ಪಕ್ಷದ ಗುಜರಾತ್ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ ಅವರು ಸೋಮವಾರ ಎಕ್ಸ್ ಖಾತೆಯಲ್ಲಿ ತಿಳಿಸಿದ್ದು, ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಕಮಲವನ್ನು ಉಡುಗೊರೆಯಾಗಿ ಸೂರತ್ ನೀಡಿದೆ. ಅವಿರೋಧವಾಗಿ ಆಯ್ಕೆಯಾದ ನಮ್ಮ ಪಕ್ಷದ ಅಭ್ಯರ್ಥಿ ಮುಕೇಶ್ ಅವರಿಗೆ ಅಭಿನಂದನೆಗಳು’ ಎಂದು ಎಕ್ಸ್ ವೇದಿಕೆಯಲ್ಲಿ ಹೇಳಿದ್ದಾರೆ.

ಮುಖೇಶ್ ದಲಾಲ್
ಮಾಲ್ಡೀವ್ಸ್ ಸಂಸತ್ ಚುನಾವಣೆ: ಚೀನಾ ಬೆಂಬಲಿತ ಮುಯಿಝಗೆ ಭರ್ಜರಿ ಗೆಲುವು, ಭಾರತದ ಪರ MDPಗೆ ಹೀನಾಯ ಸೋಲು!

ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿದರೆ, 8 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರೆಲ್ಲರೂ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಹಾಗಾಗಿ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಘೋಷಿಸಲಾಗಿದೆ. ಬಿಜೆಪಿಯ ಮುಖೇಶ್ ದಲಾಲ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಇದು ದೇಶದ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಸಂಸದರಾಗಿ ಆಯ್ಕೆಯಾದ ಕ್ಷೇತ್ರವಾಗಿದೆ. 1989ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದೆ. ಅಂದರೆ ಒಮ್ಮೆಯೂ ಕಾಂಗ್ರೆಸ್​ ಗೆದ್ದ ಇತಿಹಾಸವೇ ಇಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com