ಪಶ್ಚಿಮ ಬಂಗಾಳ: ಸರ್ಕಾರಿ ಅನುದಾನಿತ ಶಾಲೆಗಳಿಗೆ 2016 ರಲ್ಲಿ ನಡೆದ ನೇಮಕಾತಿ ಪರೀಕ್ಷೆ ಅನೂರ್ಜಿತ: ಹೈಕೋರ್ಟ್

ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಅನುದಾನಿತ ಶಾಲೆಗಳಿಗೆ 2016 ರಲ್ಲಿ ನಡೆದ ನೇಮಕಾತಿ ಪರೀಕ್ಷೆಯನ್ನು ಕೋಲ್ಕತ್ತ ಹೈಕೋರ್ಟ್ ಅನೂರ್ಜಿತಗೊಳಿಸಿದೆ.
ಹೈಕೋರ್ಟ್
ಹೈಕೋರ್ಟ್online desk

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಅನುದಾನಿತ ಶಾಲೆಗಳಿಗೆ 2016 ರಲ್ಲಿ ನಡೆದ ನೇಮಕಾತಿ ಪರೀಕ್ಷೆಯನ್ನು ಕೋಲ್ಕತ್ತ ಹೈಕೋರ್ಟ್ ಅನೂರ್ಜಿತಗೊಳಿಸಿದೆ.

ಈ ಪರೀಕ್ಷೆಗಳ ಮೂಲಕ ನಡೆದಿದ್ದ ನೇಮಕಾತಿಗಳನ್ನು ರದ್ದುಗೊಳಿಸಿದೆ. ನ್ಯಾ.ದೇಬಾಂಗ್ಸು ಬಸಕ್ ಹಾಗೂ ಮೊಹಮ್ಮದ್ ಶಬ್ಬಾರ್ ರಶ್ದಿ ಅವರಿದ್ದ ಪೀಠ ಈ ಪರೀಕ್ಷೆ, ನೇಮಕಾತಿಗೆ ಸಂಬಂಧಿಸಿದ ಮುಂದಿನ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದ್ದು, 3 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹೇಳಿದೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗಕ್ಕೆ ಹೊಸದಾಗಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಪೀಠ ಸೂಚಿಸಿದೆ. 24,640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಗೆ ಹಾಜರಾಗಿದ್ದರು. ಖಾಲಿ ಹುದ್ದೆಗಳ ವಿರುದ್ಧ ಒಟ್ಟು 25,753 ನೇಮಕಾತಿ ಪತ್ರಗಳನ್ನು ನೀಡಲಾಗಿದೆ ಎಂದು ಕೆಲವು ಅರ್ಜಿದಾರರ ಪರ ವಕೀಲ ಫಿರ್ದೌಸ್ ಶಮೀಮ್ ಹೇಳಿದರು.

ಹೈಕೋರ್ಟ್
ಪಶ್ಚಿಮ ಬಂಗಾಳ: ಕೂಚ್ ಬೆಹಾರ್‌ಗೆ ಭೇಟಿ ನೀಡುವ ಕುರಿತು ರಾಜ್ಯಪಾಲರಿಗೆ ಚುನಾವಣಾ ಆಯೋಗ ಸಲಹೆ

ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೆಲವು ಮೇಲ್ಮನವಿದಾರರು ಮಾಡಿದ ಮನವಿಯನ್ನೂ ವಿಭಾಗೀಯ ಪೀಠ ತಿರಸ್ಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com