ರಾಹುಲ್ ಗಾಂಧಿಗೆ ಅನಾರೋಗ್ಯ: ಇಂದು ಕೇರಳ ಚುನಾವಣಾ ಪ್ರಚಾರಕ್ಕೆ ಗೈರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ ಅಧ್ಯಕ್ಷ, ಯುಡಿಎಫ್ ಸಂಚಾಲಕ ಎಂಎಂ ಹಸನ್ ಮಾತನಾಡಿ ಸೋಮವಾರ ನಡೆಯಬೇಕಿದ್ದ ಗಾಂಧಿಯವರ ಎಲ್ಲಾ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ರಾಂಚಿಯಲ್ಲಿ ನಡೆದ ಭಾರತ ಬ್ಲಾಕ್ ರ್‍ಯಾಲಿಯಲ್ಲಿಯೂ ರಾಹುಲ್ ಗಾಂಧಿ ಭಾಗಿಯಾಗಿಲ್ಲ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು “ರಾಹುಲ್ ಗಾಂಧಿ ಅವರಿಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ಪ್ರಸ್ತುತ ನವದೆಹಲಿಯಿಂದ ಬೇರೆ ಕಡೆ ಪ್ರಯಾಣ ಮಾಡಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ರಾಹುಲ್ ಗಾಂಧಿ
ಬಿಜೆಪಿ 150 ಸೀಟು ದಾಟುವುದಿಲ್ಲ, ಸಂವಿಧಾನ ಬದಲಿಸುವ ಯತ್ನವನ್ನು INDIA ವಿಫಲಗೊಳಿಸುತ್ತದೆ: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟದ ರ್‍ಯಾಲಿ ನಡೆಯುತ್ತಿರುವ ಸತ್ನಾ ಮತ್ತು ರಾಂಚಿಯಲ್ಲಿ ರಾಹುಲ್ ಗಾಂಧಿ ಪ್ರಚಾರಕ್ಕೆ ಸಿದ್ಧರಾಗಿದ್ದರು. ಆದರೆ ದಿಡೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡಿದೆ. ಸದ್ಯಕ್ಕೆ ಅವರು ಪ್ರಯಾಣ ಮಾಡಲಾಗದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಹೇಳಿದರು.

ರಾಹುಲ್ ಗಾಂಧಿ ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com